ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಮುಖಂಡರ ಆಗ್ರಹ

Date:

ಬಿಜೆಪಿ ಸಂಸದ ರಾಘವೇಂದ್ರ ಪರವಾಗಿ ಮಾತನಾಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮ ಕೈಗೋಳ್ಳಬೇಕೆಂದು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ.

ಶನಿವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, “ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸಿ” ಎಂದಿದ್ದರು. ಅವರ ಹೇಳಿಕೆ, ಜಿಲ್ಲೆಯ ಕಾಂಗ್ರೆಸ್‌ನಲ್ಲಿ ತಲ್ಲಣ, ಅಸಮಾಧಾನ ಸೃಷ್ಠಿಸಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್‌ ಕೆಲವು ನಾಯಕರು ಒತ್ತಾಯಿಸಿದ್ದಾರೆ.

ಶಾಮನೂರು ಮಾತಿಗೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್ ರಾಜಣ್ಣ, “ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಅವರಿಗೆ ಇಂತಹ ಮಾತುಗಳು ಶೋಭೆ ತರುವುದಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಯೋ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡೋಣ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಬಿಜೆಪಿ ಎಂಎಲ್‌ಸಿ ಎಚ್‌ ವಿಶ್ವನಾಥ್ ಕೂಡ ಮೈಸೂರಿನಲ್ಲಿ ಮಾತನಾಡಿದ್ದು, “ಕಾಂಗ್ರೆಸ್‌ ಜೀವಂತವಾಗಿದ್ದರೆ, ಶಮನೂರು ಶಿವಶಂಕರಪ್ಪ ಅವರನ್ನು ಅಮಾನತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಶಾಮನೂರು ಶಿವಶಂಕರಪ್ಪ ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ? ಅವರು ದುಡ್ಡು ಇದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂತ ಭಾವಿಸಿದ್ದಾರೆ. ಬಿಜೆಪಿಗರೂ ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ದಾವಣಗೆರೆ ಹೋಗುವ ಬಿಜೆಪಿಗರು ಶಾಮನೂರು ಗೆಸ್ಟ್‌ ಹೌಸ್‌ನಲ್ಲೇ ಮಲಗುತ್ತಾರೆ. ಡಿ.ಕೆ ಶಿವಕುಮಾರ್ ಬಡೆಯಾಗಿದ್ದರೆ, ಶಾಮನೂರು ಅವರನ್ನು ಪಕ್ಷದಿಂದ ಅಮಾನತು ಮಾಡಲಿ” ಎಂದು ವಿಶ್ವನಾಥ್ ಸವಾಲು ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...