ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ : ಬಿ ಕೆ ಹರಿಪ್ರಸಾದ್

Date:

  • ಬಿಜೆಪಿಯಿಂದ ನೋವುಂಟಾಗಿದೆ ಎಂದ ರಾಣಿ ಸಂಯುಕ್ತಾ
  • ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ 18 ಮಂದಿ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ಆರೋಪಿಸಿದರು.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ, ಸಚಿವ ಆನಂದ್ ಸಿಂಗ್ ಸಹೋದರಿ ಬಿ ಎಲ್‌ ರಾಣಿ ಸಂಯುಕ್ತ ಸೇರಿದಂತೆ ಬಿಜೆಪಿಯ 18 ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಬಿ ಕೆ ಹರಿಪ್ರಸಾದ್ ಮತ್ತು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಬಿಜೆಪಿ ನಾಯಕರನ್ನು ಬರಮಾಡಿಕೊಂಡರು.rani samyukta

ಜಗದೀಶ್ ಶೆಟ್ಟರ್ ಅವರ ಮೇಲೆ ನಿಗಾ ಇರಿಸಲಾಗಿರುವ ಕುರಿತು ಮಾತನಾಡಿದ ಬಿ ಕೆ ಹರಿಪ್ರಸಾದ್, “ಕೇವಲ ಅವರು ಮಾತ್ರವಲ್ಲ, ನಮ್ಮೆಲ್ಲರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಕಚೇರಿಯ ದುರ್ಬಳಕೆ ಕುರಿತು ಮಾತನಾಡಿ, “ಕೇವಲ ಮುಖ್ಯಮಂತ್ರಿ ಕಚೇರಿ ಮಾತ್ರವಲ್ಲ, ಎಲ್ಲ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಇಡಿಯನ್ನು ಜಾರಿ ನಿರ್ದೇಶನಾಲಯ ಎನ್ನುವುದಕ್ಕಿಂತ ಬಿಜೆಪಿಯ ಚುನಾವಣಾ ವಿಭಾಗ ಎಂದು ಹೇಳಬಹುದು” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಸೂಡಾನ್‌ನಲ್ಲಿ ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ, `ವಿಶ್ವಗುರು’ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

ಜಗದೀಶ್ ಶೆಟ್ಟರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, “ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಯತ್ನಾಳ್ ಅವರು ಹೇಳಿದ ಪ್ರಕಾರ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕೊಡಬೇಕು. ಈ ಮೊತ್ತವನ್ನು ಬಿಜೆಪಿಯಲ್ಲಿ ಯಾರು ನೀಡಲಿದ್ದಾರೆ” ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ರಾಣಿ ಸಂಯುಕ್ತಾ, “ನಾನಿಂದು ಬಿಜೆಪಿ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದು, ಬಿಜೆಪಿಯಲ್ಲಿ ನಮಗೆ ಸಾಕಷ್ಟು ನೋವಾಗಿದೆ” ಎಂದು ತಿಳಿಸಿದರು.

“ಬರೀ ಟಿಕೆಟ್ ಹಂಚಿಕೆ ವಿಚಾರ ಮಾತ್ರವಲ್ಲ. ಬಿಜೆಪಿಯಲ್ಲಿ ಎಲ್ಲರಿಗೂ ನೋವುಂಟಾಗಿದೆ. ಆದ್ದರಿಂದ ನಮ್ಮ ಜಿಲ್ಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...