ಶಾಸಕಾಂಗ ಪಕ್ಷದ ಸಭೆ ನಡೆಸಿದ ಸಿಎಂ, ಡಿಸಿಎಂ; 12 ಗಂಟೆಗೆ ಸಿದ್ದರಾಮಯ್ಯರಿಂದ ಬಜೆಟ್‌ ಮಂಡನೆ

Date:

ಶಾಸಕಾಂಗ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ರಾಜ್ಯ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಬಜೆಟ್​ ಮತ್ತು ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಹಾಗೂ ಹೇಗೆಲ್ಲ ಮಾತನಾಡಬೇಕು ಎಂಬುದರ ಬಗ್ಗೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದು, ಗ್ಯಾರಂಟಿಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕಿವಿಮಾತು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಗಂಟೆಗೆ 14ನೇ ದಾಖಲೆ ಬಜೆಟ್​​ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಮೈಸೂರು ಪಂಚೆ, ಶಲ್ಯ ಧರಿಸಿ ಹೊಸ ಮುಖಕಳೆಯೊಂದಿಗೆ ಆಗಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡದ ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ, ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಬಜೆಟ್‌ ವಿಚಾರದಲ್ಲಿ ರಾಜ್ಯದ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಗರಿಗೆದರಿವೆ.

ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದ್ದು. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಎಂದು ನಾಡಿನ ಜನ ಎದುರು ನೋಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...