ವಿಶೇಷ ಅಧಿವೇಶನ | ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

Date:

ಗುರುವಾರದಿಂದ ರಾಜ್ಯ ವಿಶೇಷ ಅಧಿವೇಶನ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ ಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಲಿದ್ದಾರೆ.

ಇದನ್ನು ಓದಿದ್ದೀರಾ? ವಿಶೇಷ ಅಧಿವೇಶನ | ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಸಭೆಯಲ್ಲಿ ರಾಜ್ಯ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಉಪಸ್ಥಿತರಿರಲಿದ್ದಾರೆ.

ಇನ್ನು ಇಂದು ಅಧಿವೇಶನ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಸಾಂಪ್ರದಾಯಿಕವಾಗಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದುವ ಬದಲಾಗಿ ತಾವೇ ಸಿದ್ಧಪಡಿಸಿದ ಭಾಷಣ ಓದಿರುವುದು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಅದೂ ಬರೀ ಎರಡು ನಿಮಿಷಗಳ ಭಾಷಣ ಮಾಡಿ ಹೊರನಡೆದಿದ್ದು, ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.

ಸದ್ಯ ಮನರೇಗಾದ ಮರುಸ್ಥಾಪನೆಗೆ ಆಗ್ರಹಿಸಿ, ವಿಬಿ ಜಿ ರಾಮ್‌ ಜಿ ಮಸೂದೆಯ ವಿರುದ್ಧವಾಗಿ ನಿರ್ಣಯ ಅಂಗೀಕರಿಸುವ ನಿಟ್ಟಿನಲ್ಲಿ ವಿಶೇಷ ಅಧಿವೇಶನ ನಡೆಸಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಸಭೆಯಲ್ಲಿ ಈ ಬಗ್ಗೆ ಮತ್ತು ರಾಜ್ಯಪಾಲರ ನಡೆಯ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆಯಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...