‘ವಿನ್ನಿಂಗ್ ಮ್ಯಾಚ್’ಅನ್ನೂ ಸೋಲುವುದು ಹೇಗೆ ಅಂತ ಕಾಂಗ್ರೆಸ್‌ನಿಂದ ಕಲೀಬೇಕು

Date:

ಹರಿಯಾಣದಲ್ಲಿ ಬಿಜೆಪಿ ಆಡಳಿತ ಅಂತ್ಯವಾಗಲಿದೆ. ಕಾಂಗ್ರೆಸ್‌ ಭಾರೀ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂಬ ಅಭಿಪ್ರಾಯ ದೇಶಾದ್ಯಂತ ಇತ್ತು. ಆಡಳಿತಾರೂಢ ಬಿಜೆಪಿಯೇ ಸ್ವತಃ ಸೋಲೊಪ್ಪಿಕೊಂಡಿತ್ತು. ಆದಾಗ್ಯೂ, ಬಿಜೆಪಿ ಮತ್ತೆ ಗೆದ್ದಿದೆ. ಗೆಲ್ಲುವ, ಗುಲ್ಲುತ್ತೇವೆಂಬ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ ಮತ್ತೆ ಸೋಲುಂಡಿದೆ. ಕಾಂಗ್ರೆಸ್‌ ಸೋಲಿನ ವಿಪಕ್ಷಗಳಿಂದಲೇ ಟೀಕೆ ವ್ಯಕ್ತವಾಗುತ್ತಿದೆ. ಆತ್ಮಾವಲೋಕನದ ಸಲಹೆಗಳೂ ಬರುತ್ತಿದೆ. ಇದೀಗ, ಕಾಂಗ್ರೆಸ್‌ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಉದ್ಧವ್ ಬಣ) ಸಂಸದ ಸಂಜತ್ ರಾವತ್, “ವಿನ್ನಿಂಗ್‌ ಮ್ಯಾಚ್‌ನಲ್ಲೂ ಸೋಲುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಕಲಿಯಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌-ಎಎಪಿ ಮೈತ್ರಿಯಲ್ಲಿ ಸ್ಪರ್ಧಿಸಲು ಮುಂದಾಗಿದ್ದವು. ಆದರೆ, ಕೊನೆ ಕ್ಷಣದಲ್ಲಿ ಮೈತ್ರಿ ಮುರಿದು ಸ್ವತಂತ್ರವಾಗಿ ಸ್ಪರ್ಧಿಸಿದ್ದವು. ಇದನ್ನು ಉಲ್ಲೇಖಿಸಿ ಮಾತನಾಡಿದ ಸಂಜಯ್ ರಾವತ್, “ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಈಗಲೂ ಕಾಂಗ್ರೆಸ್‌ ನಂಬಿದೆ. ಪಕ್ಷದ ಸೋಲಿಗೆ ಅತಿಯಾದ ಆತ್ಮವಿಶ್ವಾಸವೇ ಕಾರಣ. ಗೆಲುವಿನ ಪಂದ್ಯವನ್ನು ಸೋಲಿನ ಪಂದ್ಯವಾಗಿ ಪರಿವರ್ತಿಸಿದೆ” ಎಂದು ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ ಕೂಡ ಕಾಂಗ್ರೆಸ್‌ ಸೋಲಿನ ಬಗ್ಗೆ ಸಂಪಾದಕೀಯ ಬರೆದಿದ್ದು, “ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದೆ. ಕಳಪೆ ಪ್ರಚಾರವು ಸೋಲಿಗೆ ಕಾರಣವಾಗಿದೆ. ಹರಿಯಾಣದಲ್ಲಿ ಬಿಜೆಪಿ ವಿರುದ್ಧ ಆಡಳಿತದ ವಿರೋಧಿ ಅಲೆ ಇದ್ದರೂ, ಅದರ ಲಾಭ ಪಡೆಯುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಸೋತಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...