ವಿಧಾನಸಭಾ ಚುನಾವಣೆಗಳಿಗೆ ತಂತ್ರ ರೂಪಿಸಲು ಕಾಂಗ್ರೆಸ್ ಸರಣಿ ಸಭೆ

Date:

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ ಕಾಂಗ್ರೆಸ್, ಈಗ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಜಾರ್ಖಂಡ್, ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತನ್ನ ಹೋರಾಟವನ್ನು ತೀವ್ರಗೊಳಿಸಲು ಪಕ್ಷವು ಸಭೆ ಸೇರುತ್ತಿದೆ. ಮುಂದಿನ ವಾರದಿಂದ ಪಕ್ಷ ಸಂಘಟನೆಯನ್ನು ಬಲಪಡಿಸಲು ಮತ್ತು ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸಲು ಸರಣಿ ಸಭೆಗಳನ್ನು ನಿಗದಿ ಮಾಡಿದೆ.

ಸಭೆಗಳ ಕುರಿತ ಯೋಜನೆಗಳನ್ನು ಪ್ರಕಟಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, “ಕಾಂಗ್ರೆಸ್‌ ಹೈಕಮಾಂಡ್ ಜೂನ್ 24ರಂದು ಜಾರ್ಖಂಡ್, 25ರಂದು ಮಹಾರಾಷ್ಟ್ರ, 26ರಂದು ಹರಿಯಾಣ ಹಾಗೂ 27ರಂದು ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಲಿದೆ” ಎಂದು ಹೇಳಿದ್ದಾರೆ.

“ದೇಶದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಏಳುತ್ತಿದೆ. ಅದನ್ನು ಮುಂದುವರೆಸುತ್ತಾ, ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ನಾವು ಸಿದ್ದರಾಗಿದ್ದೇವೆ. ನಮ್ಮ ಯೋಜನೆಗಳಿಗೆ ಕಿಕ್‌ಸ್ಟಾರ್ಟ್ ಕೊಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳ ಹಿರಿಯ ನಾಯಕರೊಂದಿಗೆ ಕಾರ್ಯತಂತ್ರದ ಸಭೆಗಳನ್ನು ನಡೆಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾರ್ಖಂಡ್‌ನಲ್ಲಿ, ಕಾಂಗ್ರೆಸ್ ತನ್ನ ಸಾಂಸ್ಥಿಕ ನೆಲೆಯನ್ನು ಮತ್ತಷ್ಟು ವಿಸ್ತರಿಸಲು ಎದುರು ನೋಡುತ್ತಿದೆ. ಆ ರಾಜ್ಯದಲ್ಲಿ 7 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ 2 ಸ್ಥಾನಗಳಲ್ಲಿ ಮಾತ್ರವೇ ಗೆದ್ದಿದೆ.

ಮಹಾರಾಷ್ಟ್ರ ಮತ್ತು ಹರಿಯಾಣ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡಿರುವ ಕಾಂಗ್ರೆಸ್, ಎರಡೂ ರಾಜ್ಯಗಳಲ್ಲಿ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. “ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಪಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.

ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ ಎಂವಿಎ 30 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಲ್ಲಿ, ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ. “ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯನ್ನು ಮಣಿಸಲು ಎಂವಿಎ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ” ಎಂದು ಚೆನ್ನಿತ್ತಲ ಹೇಳಿದ್ದಾರೆ.

ಹರಿಯಾಣದ 10 ಲೋಕಸಭಾ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, ರಾಜ್ಯ ಚುನಾವಣೆಯಲ್ಲಿ ಗಮನಾರ್ಹ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...