ಕಾಂಗ್ರೆಸ್‌ ಸಚಿವ ಮಂಕಾಳ್ ವೈದ್ಯ ಕೋಮುವಾದಿ ಹೇಳಿಕೆ; ವ್ಯಾಪಕ ಆಕ್ರೋಶ

Date:

“ಗೋ ಕಳ್ಳತನ ಮಾಡುವವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ” ಎಂದು ಮೀನುಗಾರಿಕಾ ಸಚಿವ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂಕಾಳ್ ಎಸ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಗುರಿಯಾಗಿದೆ.

ಕಾರವಾರದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗೋವು ಕಳ್ಳತನ ಪ್ರಕರಣಗಳು ಹೆಚ್ಚುತ್ತಿದೆ. ಅದನ್ನು ತಡೆಯಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಹಸುವಿನ ಮೇಲೆ ದೌರ್ಜನ್ಯ ನಡೆಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ. ಅವರು ಯಾರೇ ಆಗಲಿ ಕ್ರಮ ಕೈಗೊಳ್ಳಲಿ. ಇನ್ನೂ ಹೆಚ್ಚಾಗಿ ಹೇಳಬೇಕು ಅಂದ್ರೆ ಗೋ ಕಳ್ಳರ ವಿರುದ್ಧ ಅಥವಾ ಗೋವಿನ ಮೇಲೆ ದೌರ್ಜನ್ಯ ನಡೆಸುವವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ” ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುವಾದಿ ಹೇಳಿಕೆ ನೀಡಿದ್ದಾರೆ.

ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಕಾಳು ವೈದ್ಯ ಅವರ ಹೇಳಿಕೆ ಖಂಡಿಸಿ ಪೋಸ್ಟ್‌ ಹಾಕಿರುವ ಬಸವರಾಜು ಸೂಳಿಬಾವಿ ಅವರು, “ಸಮಾಜವಾದಿಗಳಾದ ಸಿದ್ಧರಾಮಯ್ಯನವರೆ ಇವರು ನಿಮ್ಮ ಸರ್ಕಾರದ ಮಂತ್ರಿನಾ? ಈಗಿರುವ ಕಾಂಗ್ರೆಸ್‌ ಸರ್ಕಾರವನ್ನು ಬಿಜೆಪಿ ಸರ್ಕಾರ ಎಂದು ಭಾವಿಸಿದ್ದರಾ ಇವರು? ಸಂವಿಧಾನ/ ಸರ್ಕಾರದ/ ಆಡಳಿತದ ಭಾಷೆ ಗೊತ್ತಿಲ್ಲದ ಮೂರ್ಖತನವಿರುವ ವ್ಯಕ್ತಿಯನ್ನು ಹೇಗೆ ಮಂತ್ರಿ ಮಾಡಿದಿರಿ? ದನಗಳ್ಳತನವಾದರೆ ಬಂಧಿಸುವ, ಶಿಕ್ಷೆ ವಿಧಿಸುವಂಥ ಅದಕ್ಕೊಂದು ವ್ಯವಸ್ಥೆ ಇದೆ ಎಂದೂ ಅರ್ಥವಾಗದಿರುವ ಈ ಮಂತ್ರಿ ಯಾವ ಸೀಮೆಯ ಸರ್ವಾಧಿಕಾರಿಗಿಂತ ಕಡಿಮೆ ಇದ್ದಾರೆ? ಸರ್ಕಾರದ ಗೌರವ ಕೊಂಚವಾದರೂ ಉಳಿಸಿಕೊಳ್ಳಬೇಕೆಂದರೆ ಈ ಮಂತ್ರಿಯನ್ನು ತಕ್ಷಣ ವಜಾ ಮಾಡಿ. ಮಾಡ್ತೀರಾ? ಇಂಥ ಸರ್ವಾಧಿಕಾರಿಯನ್ನು ಉಳಿಸಿಕೊಂಡು ಮುಂದುವರಿಯುತ್ತೀರಾ? ಸರ್ಕಾರದ ಬಿಡೆಗೆ ಬಿದ್ದವರೂ ದನಿ ಎತ್ತಬಹುದೆ ಈ ಕುರಿತು? ಎಚ್ಚರಾಗಿ ಎದ್ದೇಳಬಹುದೆ?” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರು, “ಕದ್ದು ಗೋವುಗಳನ್ನು ಕೊಂಡು ಹೋಗುವವರನ್ನು ಎನ್ಕೌಂಟರ್ ಮಾಡಲೇಬೇಕು…. ಕದ್ದ ಮಾಂಸ ತಿಂದರು ಆರಾಮ್ ಎಂದು ಮುಸ್ಲಿಮರಲ್ಲಿದೆ, (ಗೋಗಳನ್ನ ಕದಿಯುವವರ ಜೊತೆಯಲ್ಲಿ ಕೆಲವೊಂದು ಹಿಂದೂಗಳು ಕೂಡ ಸೇರಿಕೊಂಡಿದ್ದಾರೆ ಅವರನ್ನು ಎನ್ಕೌಂಟರ್ ಮಾಡಬೇಕು) ಯಾರಾದರೂ ರೈತರು ಮಾರಿದರೆ (14 ವರ್ಷದ ನಂತರದ ಗೋವು) ಅದನ್ನು ಕೊಂಡೋಗಿ ತಿನ್ನಬಹುದೆಂದು ಬಿಜೆಪಿ ಹೇಳಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...