‘ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ’ ಎಂದ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು!

Date:

‘ಯಡಿಯೂರಪ್ಪ ಪುತ್ರ, ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ’ ಎಂದು ಕಾಂಗ್ರೆಸ್‌ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಇದು ಈಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಬೆಕ್ಕಿನಕಲ್ಮಠದಲ್ಲಿಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಾಮನೂರು ಶಿವಶಂಕರಪ್ಪ, ”ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದ ನೀವೇ ಧನ್ಯರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿ ಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲವನ್ನು ತಮ್ಮ ಕೈಯಿಂದ ಆಗದೇ ಇದ್ದರೂ ಸಹ ಆಗುವಂತಹ ರೀತಿಯಲ್ಲಿ ಕೆಲಸಗಳನ್ನು ಮಾಡಿ ತೋರಿಸಿಕೊಟ್ಟ ಧೀಮಂತ ನಾಯಕ ಎಂದರೆ ತಪ್ಪಾಗಲಾರದು” ಎಂದು ಹಾಡಿ, ಹೊಗಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನೇನು ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಬರಲಿದೆ. ರಾಘವೇಂದ್ರ ಅವರೇ ಸ್ಪರ್ಧಿಸುತ್ತಾರೆ. ಬಿಜೆಪಿಯಿಂದ ಬೇರೆ ಯಾರಿಗೂ ಟಿಕೆಟ್‌ ನೀಡುವುದಿಲ್ಲ. ಅವರು ಮತ್ತೆ ಸ್ಪರ್ಧೆ ಮಾಡೇ ಮಾಡುತ್ತಾರೆ. ಅವರು ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಸಮತೂಕ ಮಾಡಿ ಅವರನ್ನು ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಕ್ಷೇತ್ರದ ಜನತೆಗೆ ಏನು ಬೇಕು? ಅವರು ಬಯಸಿದ್ದು ಅಭಿವೃದ್ಧಿ. ಅಂತಹ ನಾಯಕನನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಅಭಿವೃದ್ಧಿಗೆ ಆದ್ಯತೆ ನೀಡಿ ಮುಂಬರುವ ಚುನಾವಣೆಯಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಿ” ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಕೂಡ ಆಗಿರುವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಈ ಹೇಳಿಕೆಯ ವಿಡಿಯೋವನ್ನು ಖುದ್ದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ, “ಈ ದಿನ ನನ್ನ ರಾಜಕೀಯ ಜೀವನದ ಅತ್ಯಂತ ಸುದಿನಗಳಲ್ಲಿ ಒಂದಾಗಿದ್ದು, ಹಿರಿಯ ಮುತ್ಸದ್ಧಿ ನಾಯಕರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪರವರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮಾತಾಡಿದ್ದಾರೆ. ಇದರಿಂದ ನನಗೆ ನೂರಾನೆ ಬಲ ಬಂದಂತಾಗಿದೆ. ಮುಂದಿನ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಪ್ರಗತಿಗಾಗಿ ಮತ್ತಷ್ಟು ದುಡಿಯುವ ಮೂಲಕ ಸನ್ಮಾನ್ಯರು ನನ್ನ ಮೇಲಿಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಶಾಮನೂರು ಶಿವಶಂಕರಪ್ಪರವರ ಹೇಳಿಕೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ, “2024ರ ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಸಂತಸ ತಂದಿದೆ. ಅವರು ನಮ್ಮ ಸಮಾಜದ ಹಿರಿಯ ಮುಖಂಡರು. ಅವರ ಹೇಳಿಕೆಗೆ ಅದಕ್ಕಾಗಿ ಧನ್ಯವಾದ ಸಲ್ಲಿಸುತ್ತೇನೆ. ಸಂಸದನಾಗಿ ರಾಘವೇಂದ್ರ ಅವರ ಕಾರ್ಯವನ್ನು ಎಲ್ಲರೂ ಮೆಚ್ಚಿದ್ದಾರೆ” ಎಂದು ಪುತ್ರನ ಬಗ್ಗೆ ಬಂದ ಹೊಗಳಿಕೆಗೆ ಧನ್ಯವಾದ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...