ಕಾಂಗ್ರೆಸ್, ಎನ್‌ಸಿಪಿ ಅಹಂ ಬದಿಗಿಡಲಿ: ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ ಆಕ್ರೋಶ

Date:

“ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗಲೂ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ)ಯನ್ನು ನಿರ್ಲಕ್ಷಿಸಿದೆ” ಎಂದು ವಿಬಿಎ ಆಕ್ರೋಶ ಹೊರಹಾಕಿದೆ.

“ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮಹತ್ವವನ್ನು ಇತಿಹಾಸದಿಂದ ಕಲಿಯಬೇಕು. ವಿವಿಧ ದೇಶಗಳ ಮೈತ್ರಿಯಿಂದಾಗಿ ಹಿಟ್ಲರ್‌ ಸೋತನು. ಮಹಾ ವಿಕಾಸ್ ಅಘಾಡಿಯು ಇನ್ನೂ ಏಕೆ ವಿಬಿಎಯನ್ನು ಮೈತ್ರಿಗೆ ಆಹ್ವಾನಿಸಿಲ್ಲ ಎಂಬುದು ಮಹಾರಾಷ್ಟ್ರದ ಜನರಿಗೆ ದೊಡ್ಡ ನಿಗೂಢವಾಗಿಯೇ ಉಳಿದಿದೆ” ಎಂದು ವಿಬಿಎ ಆಶ್ಚರ್ಯ ವ್ಯಕ್ತಪಡಿಸಿದೆ.

“ವಿಬಿಎಗೆ ಇರುವ ಜನಪ್ರಿಯತೆ ಕುರಿತು ಎಂವಿಎ ಕುರುಡಾಗಿದೆ, ನಮ್ಮ ಶಕ್ತಿಯನ್ನು ಅವರು ನೋಡಿಲ್ಲ ಅಥವಾ ಅವರ ಅಹಂ ನಮ್ಮನ್ನು ಆಹ್ವಾನಿಸಲು ತಡೆಯಾಗಿ ನಿಂತಿದೆ. ಇಲ್ಲವಾಗಿದ್ದರೆ ತಾರತಮ್ಯ ಮತ್ತು ಅಂಚಿನಲ್ಲಿರುವ ಜನರನ್ನು ಪ್ರತಿನಿಧಿಸುವ ಪಕ್ಷದ ಸಹಾಯವನ್ನು ಪಡೆಯಲು ಈ ಎರಡೂ ಪಕ್ಷಗಳು ಹೆಮ್ಮೆಪಡುತ್ತಿದ್ದವು” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಇತ್ತೀಚಿನ ಸಮಾರಂಭದಲ್ಲಿ ಸೇರಿದ್ದ ಜನರನ್ನು ಇಡೀ ಮಹಾರಾಷ್ಟ್ರವೇ ನೋಡಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ನಿಜವಾಗಿಯೂ ಬಿಜೆಪಿಯನ್ನು ಸೋಲಿಸಲು ಬಯಸಿದರೆ, ಅವರು ತಮ್ಮ ಅಹಂಕಾರವನ್ನು ಬದಿಗಿಟ್ಟು ಅಧಿಕೃತವಾಗಿ ವಿಬಿಎಯನ್ನು ಎಂವಿಎಗೆ ಆಹ್ವಾನಿಸಬೇಕು” ಎಂದು ತಿಳಿಸಿದೆ.

“ಒಂದು ಪಕ್ಷದ ಅಹಂ ಮತ್ತು ಮೈತ್ರಿಯಲ್ಲಿನ ವಿಫಲತೆ ಏನು ಮಾಡಬಹುದೆಂದು ನಾವೆಲ್ಲರೂ ನೋಡಿದ್ದೇವೆ; ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಚುನಾವಣೆಗಳು ಇತ್ತೀಚಿನ ಉದಾಹರಣೆಗಳಾಗಿವೆ” ಎಂದು ಪಕ್ಷ ಎಚ್ಚರಿಸಿದೆ.

ಈ ವರ್ಷದ ಆರಂಭದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸರಣಿ ಸಭೆಗಳನ್ನು ನಡೆಸಿ ಮೈತ್ರಿಯನ್ನು ಘೋಷಿಸಿದ್ದರು. ಆದಾಗ್ಯೂ, ಮಹಾ ವಿಕಾಸ್ ಅಘಾಡಿಯಲ್ಲಿ ವಿಬಿಎ ಸೇರಿಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿರಿ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ’ಸಾಕ್ಷ್ಯಚಿತ್ರ’ ಪ್ರದರ್ಶನ ಇಂದು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...