ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

Date:

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ನಾಯಕರು ಬುಧವಾರ ಮೌನ​ ಪ್ರತಿಭಟನೆ ನಡೆಸಿದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​​​, ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮುಖಂಡರು ಭಾಗಿಯಾಗಿದ್ದಾರೆ.

ಸಚಿವರಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ ಆರ್ ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಧರಣಿ ಕುಳಿತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ

“ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು” ಎಂಬ ಹೇಳಿಕೆ ಸಂಬಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಮೇಲೆ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ ಶುಕ್ರವಾರ (ಜುಲೈ 7) ತಿರಸ್ಕರಿಸಿತ್ತು.

ಈ ಮೂಲಕ ರಾಹುಲ್‌ ಅವರ ಲೋಕಸಭೆ ಸದಸ್ಯತ್ವದ ಅನರ್ಹತೆ ಮುಂದುವರಿಯುವಂತಾಗಿದೆ. ರಾಹುಲ್‌ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಗುಜರಾತ್‌ ಸೆಷನ್ಸ್‌ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಅವರು ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಆದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ಗುಜರಾತ್‌ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಿದೆ. “ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ರಾಹುಲ್ ಅವರು 2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆ ವೇಳೆ “ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು” ಎಂದು ಹೇಳಿದ್ದರು. ಪ್ರಕರಣ ಸಂಬಂಧ ಗುಜರಾತ್ ಸೂರತ್‌ನ ಸೆಷನ್ಸ್‌ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ 2023ರ ಮಾರ್ಚ್‌ 23 ರಂದು 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಬಳಿಕ ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...