ಪ್ರಣಾಳಿಕೆ ಬಿಡುಗಡೆ | ‘ಐದು ನ್ಯಾಯ, 25 ಗ್ಯಾರಂಟಿ’ಗಳು ಚುನಾವಣೆಯ ಗೇಮ್‌ಚೇಂಜರ್ ಎಂದ ಕಾಂಗ್ರೆಸ್

Date:

ಕಾಂಗ್ರೆಸ್ ಮಂಗಳವಾರ ತನ್ನ ಲೋಕಸಭೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ದೇಶಕ್ಕೆ ಬದಲಾವಣೆಯು ಅತೀ ಅಗತ್ಯ ಎಂದಿದೆ. “ನಮ್ಮ ಪ್ರಣಾಳಿಕೆಯು ಜನರಿಗೆ ನ್ಯಾಯ ಒದಗಿಸುವ ಉದ್ದೇಶ” ಎಂದಿರುವ ಕಾಂಗ್ರೆಸ್ ಐದು ‘ನ್ಯಾಯ’ಗಳನ್ನು ಪರಿಚಯಿಸಿದೆ. ಜೊತೆಗೆ ’25 ಗ್ಯಾರಂಟಿ’ಗಳನ್ನು ಘೋಷಿಸಿದೆ.

ಉನ್ನತ ಮಟ್ಟದ ಕಾಂಗ್ರೆಸ್ ವರ್ಕಿಂಗ್ ಕಮಿಟಿಯು (ಸಿಡಬ್ಲ್ಯೂಸಿ) ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆಯ ಬಗ್ಗೆ ಸತತ ಮೂರು ಗಂಟೆಗಳ ಕಾಲ ಸಭೆಯನ್ನು ನಡೆಸಿದೆ. ಅದಾದ ಬಳಿಕ ತನ್ನ ಐದು ನ್ಯಾಯ ಗ್ಯಾರಂಟಿಗಳೊಂದಿಗೆ ಜನರನ್ನು ತಲುಪಲು ಸಜ್ಜಾಗಿದೆ.

ಈ ಐದು ನ್ಯಾಯ ಗ್ಯಾರಂಟಿಗಳು ಯುವಕರು, ಮಹಿಳೆಯರು, ಉದ್ಯೋಗಿಗಳು, ರೈತರು ಮತ್ತು ದಮನಿತರಿಗಾಗಿ ಜಾರಿ ಮಾಡಲಾಗಿದೆ. ಪ್ರತಿ ನ್ಯಾಯ ಗ್ಯಾರಂಟಿಯಡಿಯಲ್ಲೂ ಐದು ಗ್ಯಾರಂಟಿಗಳು ಇದೆ. ಅಂದರೆ ಒಟ್ಟಾಗಿ ಕಾಂಗ್ರೆಸ್ ಈಗ 25 ಗ್ಯಾರಂಟಿಗಳನ್ನು ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಭರವಸೆಯನ್ನು ಕೂಡಾ ಈ ಪ್ರಣಾಳಿಕೆಯಲ್ಲಿ ನೀಡಲಿದೆ. ಜೊತೆಗೆ ಸಾಂವಿಧಾನಿಕ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಕಾನೂನು ಜಾರಿ ಮಾಡುವ ಭರವಸೆ ನೀಡಲಿದೆ. “ಈ ಐದು ಗ್ಯಾರಂಟಿಗಳು ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣ ಗೇಮ್‌ಚೇಂಜರ್ ಆಗಲಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದರು.

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾನದ ಪ್ರಮಾಣವನ್ನು ಹೆಚ್ಚಿಸಲಿವೆಯೇ?

“ಲೋಕಸಭೆ ಚುನಾವಣೆಗೆ ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ಜನರಿಗೆ ನಮ್ಮ ಗ್ಯಾರಂಟಿಗಳ ಬಗ್ಗೆ ತಿಳಿಸಲು ನಾವು ಬೃಹತ್ ಪ್ರಚಾರವನ್ನು ನಡೆಸಲಿದ್ದೇವೆ” ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು. ಇನ್ನು ಬಿಜೆಪಿಯ ಗ್ಯಾರಂಟಿಗಳನ್ನು ಟೀಕಿಸಿದ ಕಾಂಗ್ರೆಸ್ ಮುಖಂಡ ಅದು “ಸುಳ್ಳುಗಳ ಗೊಂಚಲು” ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ಐದು ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿದೆ. ಭಾಗಿಧಾರಿ ನ್ಯಾಯ, ಕಿಸಾನ್ ನ್ಯಾಯ, ನಾರಿ ನ್ಯಾಯ, ಶ್ರಮಿಕ ನ್ಯಾಯ ಮತ್ತು ಯುವ ನ್ಯಾಯ ಎಂಬ ಐದು ಗ್ಯಾರಂಟಿ ಅಡಿಯಲ್ಲಿ ತಲಾ ಐದು ಗ್ಯಾರಂಟಿಗಳಂತೆ ಜೊತೆಯಾಗಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...