ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ 12 ಸಭೆ; ದಾಖಲೆ ಕೇಳಿದ ಕಾಂಗ್ರೆಸ್

Date:

ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ 2008ರಿಂದ ಈವರೆಗೆ ಬಿಜೆಪಿಯು 12 ಸಭೆಗಳನ್ನು ನಡೆಸಿದ್ದು, ಆ ಸಭೆಗಳ ಸಂಪೂರ್ಣ ದಾಖಲೆಯನ್ನು ನೀಡುವಂತೆ ಕಾಂಗ್ರೆಸ್ ಸೋಮವಾರ ಹೇಳಿದೆ. ‘ಈ ಪ್ರತಿ ಸಭೆಗಳಲ್ಲಿ ಏನಾಗಿದೆ, ಎರಡು ಪಕ್ಷಗಳು ಏಕೆ ಆಗಾಗ್ಗೆ ಸಭೆ ನಡೆಸಿದೆ’ ಎಂದು ವಿವರಿಸಲು ಕಾಂಗ್ರೆಸ್‌ ಬಿಜೆಪಿಗೆ ಪ್ರಕಟಣೆಯಲ್ಲಿ ತಿಳಿಸಿದೆ.

“ಜೂನ್ 2020 ರಿಂದ ಪ್ರಧಾನಿ ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ ಭಾರತದ ಜನರು ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ ಎಂದು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯೂನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ” ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕಲಬುರಗಿ | ಎಸ್‌ಯುಸಿಐ(ಕಮ್ಯೂನಿಸ್ಟ್)‌ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿ ರಾಜಕಾರಣಿಗಳು ಚೀನಾದ ಕಮ್ಯೂನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿದ ಖೇರಾ ‘ಪದೇ ಪದೇ ಸಭೆ’ ನಡೆಸು ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮೋದಿಯ ಮೂರು ಸುಳ್ಳುಗಳು | ಮಣಿಪುರ, ಚೀನಾ ಅತಿಕ್ರಮಣ ಮತ್ತು ಕೋವಿಡ್‌ನಿಂದ ಬಚಾವು- ಇದು ಜನದ್ರೋಹವಲ್ಲವೇ?

“ಈ ಪ್ರತಿಯೊಂದು ಸಭೆಗಳಲ್ಲಿ ಏನಾಗಿದೆ? ಈ ಎರಡು ಪಕ್ಷಗಳು ಏಕೆ ಆಗಾಗ್ಗೆ ಸಭೆ ನಡೆಸುತ್ತವೆ? ಬಿಜೆಪಿ ಕಾರ್ಯಕರ್ತರು ಕಮ್ಯೂನಿಸ್ಟ್ ಪಕ್ಷದ ‘ಶಾಲೆಗೆ’ ಹೋದಾಗ, ಅವರಿಗೆ ಏನು ಕಲಿಸಲಾಗಿದೆ? ಒಂದೇ ತಿಂಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ನಾಯಕರು ಸಿಸಿಪಿಯನ್ನು ಏಕೆ ಭೇಟಿ ಮಾಡಿದರು? ಜೂನ್ 2017ರ ಡೋಕ್ಲಾಮ್‌ನಲ್ಲಿ ಗಡಿ ಘರ್ಷಣೆಗೂ ಇದಕ್ಕೂ ಸಂಬಂಧವಿದೆಯೇ” ಎಂದು ಕೇಳಿದರು.

ಬಿಜೆಪಿ ಮತ್ತು ಚೀನಾದ ಕಮ್ಯೂನಿಸ್ಟ್ ಪಕ್ಷದ ನಡುವಿನ ಎಲ್ಲಾ ಸಭೆಗಳ ವಿವರಗಳನ್ನು ಹಂಚಿಕೊಂಡ ಖೇರಾ, “ಅಕ್ಟೋಬರ್ 2008ರಲ್ಲಿ, 15 ಸದಸ್ಯರ ಚೀನಾದ ನಿಯೋಗವು ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಬಾಂಧವ್ಯವನ್ನು ಬೆಳೆಸಲು ಒಲವು ತೋರುತ್ತಾ ಬಂದಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...