ಕಾಂಗ್ರೆಸ್‌ನವರು 30-35 ಜನಕ್ಕೂ ಡಿಸಿಎಂ ಸ್ಥಾನ ಕೊಟ್ಟು ಬಿಡಲಿ: ಕುಮಾರಸ್ವಾಮಿ ವ್ಯಂಗ್ಯ

Date:

ಕಾಂಗ್ರೆಸ್ಸಿನಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, “ಕಾಂಗ್ರೆಸ್‌ನವರು 30-35 ಜನಕ್ಕೂ ಡಿಸಿಎಂ ಸ್ಥಾನ ಕೊಟ್ಟು ಬಿಡಲಿ” ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಮಾಜಿ ಸಿಎಂ, “ಕಾಂಗ್ರೆಸ್‌ನಲ್ಲಿ ಪ್ರತಿ ಜಾತಿಗೆ ಉಪಮುಖ್ಯಮಂತ್ರಿ ಕೊಡಬೇಕು ಎಂಬ ಚರ್ಚೆ ನಡೆಯುತ್ತಿದೆ. ನನ್ನ ಅಭಿಪ್ರಾಯದಲ್ಲಿ ಸುಮಾರು 30-35 ಜನರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟು ಬಿಡಲಿ. ಆಗ ಯಾವ ಸಮಸ್ಯೆಯೂ ಇರಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ಪ್ರತಿನಿತ್ಯ ಕೆಲವು ಸಚಿವರು, ಮುಖಂಡರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಜನರಿಗೆ ಇದು ಯಾವುದೂ ಅಗತ್ಯವಿಲ್ಲ. ಅಧಿಕಾರದಲ್ಲಿರುವ ಕಾಂಗ್ರೆಸ್ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡ್ತಾ ಇದೆ. ಈಗ ಗ್ಯಾರಂಟಿ ನೋಡಿಕೊಳ್ಳೋದಕ್ಕೂ ಓರ್ವ ಅಧ್ಯಕ್ಷನಂತೆ, ಐವರು ಉಪಾಧ್ಯಕ್ಷರಂತೆ. ಇದೆಲ್ಲ ಬೇಕಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿಕ್ಕಮಗಳೂರು, ಕೊಡಗು ಭಾಗದ ಕಾಫಿ ಬೆಳೆಗಾರರು ಅಕಾಲಿಕ ಮಳೆಯ ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಗ್ಗೆ ಸಿಎಂ ಆಗಲೀ, ಡಿಸಿಎಂ ಆಗಲೀ, ಸಚಿವರಾಗಲೀ ಮಾತನಾಡುತ್ತಿದ್ದಾರಾ? ರೈತರ ಸಂಕಷ್ಟವನ್ನು ಕೇಳುತ್ತಿದ್ದಾರ? ಎಂದು ಕೇಳಿದ ಕುಮಾರಸ್ವಾಮಿ, ಕಾಂಗ್ರೆಸ್ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಕಾಂಗ್ರೆಸ್​ನ ಸದ್ಯದ ಪರಿಸ್ಥಿತಿ ನನಗೆ ಅರ್ಥವಾಗಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಯುವನಿಧಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯುವನಿಧಿ ಯೋಜನೆ ಕಾರ್ಯಕ್ರಮದಲ್ಲಿ ಏನಿದೆ? ಯುವನಿಧಿ ಯೋಜನೆಗೆ ಎಷ್ಟು ಜನ ನೋಂದಣಿ ಮಾಡಿಸಿದ್ದಾರೆ? 2023-2024 ಎಷ್ಟು ಜನ ಪದವಿ ಪಡೆದಿದ್ದಾರೆ, ಅವರ ಗೈಡ್ ಲೈನ್ಸ್​​​​ನಲ್ಲಿ ಏನಿದೆ ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಹಾವೇರಿ | ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು: ಮಹಿಳೆ ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ

“ಮಂಡ್ಯದಲ್ಲಿ ನಮ್ಮ ಸಾಮಾನ್ಯ ಕಾರ್ಯಕರ್ತ ಕೂಡ ಗೆಲ್ಲುತ್ತಾನೆ. ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ, ಈ ಚುನಾವಣೆ ಬೇರೆ. ಇವತ್ತು ಓರ್ವ ಸಾಮಾನ್ಯ ಕಾರ್ಯಕರ್ತನ ನಿಲ್ಲಿಸಿದರೂ ಗೆಲ್ಲಲಿದ್ದಾರೆ. ಕಳೆದ ಬಾರಿ ಎಲ್ಲರೂ ಪಕ್ಷೇತರ ಅಭ್ಯರ್ಥಿಯ ಪರ ಮತ ಹಾಕಿದರು. ರೈತರು, ಬಿಜೆಪಿ, ಕಾಂಗ್ರೆಸ್ಸಿಗರು ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಜೆಡಿಎಸ್ ಬಿಟ್ಟು ಶೇ 2ರಿಂದ 3ರಷ್ಟು ಮತದಾರರು ಮಾತ್ರ ನಮ್ಮ ಪರ ಇದ್ದರು. ಈಗ ಮಂಡ್ಯ ಕ್ಷೇತ್ರದಲ್ಲಿ ಆ ವಾತಾವರಣ ಇಲ್ಲ” ಎಂದು ಇದೇ ವೇಳೆ ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...