ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ ಆಳವಾಗಿ ಆತ್ಮಾವಲೋಕನ ಮಾಡಬೇಕು: ಒಮರ್ ಅಬ್ದುಲ್ಲಾ

Date:

ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಿರುವ ಹರಿಯಾಣದಲ್ಲಿ ತನ್ನ ಸೋಲಿಗೆ ಕಾರಣಗಳೇನು ಎಂದು ಕಂಡುಕೊಳ್ಳಲು ಕಾಂಗ್ರೆಸ್ ಆಳವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಸ್ಪರ್ಧಿಸಿದ್ದವು. ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಗೆಲುವು ಸಾಧಿಸಿದೆ. ಒಮರ್ ಅಬ್ದುಲ್ಲಾ ಮುಂದಿನ ಮುಖ್ಯಮಂತ್ರಿಯೂ ಆಗಲಿದ್ದಾರೆ. ಆದರೆ, ಹರಿಯಾಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್‌, ಸೋಲುಂಡಿದೆ. ಈ ಬಗ್ಗೆ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

“ಈ ಎಕ್ಸಿಟ್ ಪೋಲ್‌ಗಳನ್ನು ನಂಬಿಕೊಂಡು ನಾವು ನಮ್ಮ ಸಮಯ ವ್ಯರ್ಥ ಮಾಡುತ್ತಿದ್ದೇವೆಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈ ಚುನಾವಣಾ ಸಮೀಕ್ಷೆಗಳು ತಲೆಕೆಳಗಾಗುತ್ತವೆ ಎಂದು ಯಾರೂ ನಂಬಿರಲಿಲ್ಲ. ಅಂತಿಮವಾಗಿ ಏನಾಯಿತು. ಸಮೀಕ್ಷೆಗಳು 60 ಎಂದಿದ್ದಲ್ಲಿ 30 ಬಂದಿದೆ. 30 ಎಂದಿದ್ದಲ್ಲಿ 60 ಆಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಕ್ಸಿಟ್ ಪೋಲ್‌ಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ ಎಂದಿದ್ದವು. ಆದೆ, ಕಾಂಗ್ರೆಸ್‌ 35 ಸ್ಥಾನ ಗಳಿಸಿದ್ದು, ಮತ್ತೆ ಸೋಲುಂಡಿದೆ. ತನ್ನ ಸೋಲಿಬನ ಬಗ್ಗೆ ಕಾಂಗ್ರೆಸ್‌ ಆಳವಾಗಿ ಆಲೋಚನೆ ನಡೆಸಬೇಕು. ಸೋಲಿಗೆ ಕಾರಣಗಳನ್ನು ಕಂಡುಹಿಡಿಯಬೇಕು” ಎಂದು ಅಬ್ದುಲ್ಲಾ ಹೇಳಿದ್ದಾರೆ.

“ನನ್ನ ಕೆಲಸ ತಮ್ಮ ಪಕ್ಷವನ್ನು ಮುನ್ನಡೆಸುವುದು. ಜಮ್ಮು-ಕಾಶ್ಮೀರದಲ್ಲಿ ಮೈತ್ರಿಗೆ ಸಹಾಯ ಮಾಡುವುದು. ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

2019ರಲ್ಲಿ ಸಂವಿಧಾನದ 370ನೇ ರದ್ದಾದ ಬಳಿಕ, ಮೊದಲ ಬಾರಿಗೆ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆದಿದೆ. ಎನ್‌ಸಿ-ಕಾಂಗ್ರೆಸ್‌ 50 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚಿಸಲು ಸಜ್ಜಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...