ವಿಪಕ್ಷ ನಾಯಕ ಸ್ಥಾನದ ಬಗ್ಗೆ ಕಾಂಗ್ರೆಸ್‌ ತಲೆ ಕೆಡಿಸಿಕೊಳ್ಳುವುದು ಬೇಡ; ಬಿಜೆಪಿ ತಿರುಗೇಟು

Date:

  • ಕಾಂಗ್ರೆಸ್‌ನಿಂದ ಬುದ್ದಿ ಹೇಳಿಸಿಕೊಳ್ಳುವ ಪರಿಸ್ಥಿತಿ ಯಾರಿಗೂ ಬಂದಿಲ್ಲ
  • ಸದನ ಪ್ರಾರಂಭಕ್ಕೂ ಮೊದಲೆ ವಿಪಕ್ಷ ನಾಯಕನ ಘೋಷಣೆ ಆಗಲಿದೆ

ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಬಿಜೆಪಿ ಮಾತ್ರ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಕಾಂಗ್ರೆಸ್‌ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೇ ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್‌ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ” ಎಂದು ತಿರುಗೇಟು ನೀಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್‌ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ” ಎಂದು ಕುಟುಕಿದೆ.

“ಇಷ್ಟಕ್ಕೂ ಹೊಸದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸಿದ್ದರಾಮಯ್ಯ 2008ರಲ್ಲಿ ಅಂದಿನ ವಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಗುನ ಖರ್ಗೆ ಅವರಿಗೆ ದೊರೆತ ಕಾರಣ, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಆ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿದಾಗಲೂ, ಆ ಶಾಸಕರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು” ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಕ್ರಮವೊಂದರ ನಿಮಿತ್ತ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಸಿದ್ದರಾಮಯ್ಯ ಅವರು ಒಟ್ಟಿಗೆ ಪ್ರಯಾಣಿಸಿದ್ದರು. ಆ ಸಂದರ್ಭವನ್ನು ತಮಗೆ ಲಾಭವಾಗುವ ಹಾಗೆ ಸುದ್ದಿ ಹಬ್ಬಿಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಸಿದ್ದರು. ಬೆದರಿಕೆಗೆ ಬಗ್ಗಿದ ಹೈಕಮಾಂಡ್ ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯರಿಗೆ ವಿಪಕ್ಷ ನಾಯಕ ಸ್ಥಾನ ನೀಡಿತ್ತು” ಎಂದು ವಿವರಿಸಿದೆ.

“ಈ ಬೆಳವಣಿಗೆಯನ್ನು ಕಟುವಾಗಿ ಟೀಕಿಸಿದ್ದ ವಿರೋಧ ಪಕ್ಷದ ನಿರ್ಗಮಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ‘10 ಜನ ಶಾಸಕರೊಂದಿಗೆ ಬಂದ ಸಿದ್ದರಾಮಯ್ಯ, ಈಗ 100 ಶಾಸಕರ ಮುಖ್ಯಸ್ಥರಾಗಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಎಲ್ಲಾ ಘಟನೆಗಳನ್ನು ಕಾಂಗ್ರೆಸ್ ಮರೆತಂತೆ ಕಾಣುತ್ತಿದೆ. ಚಿಂತಿಸಬೇಡಿ, ಕೆಲವೇ ದಿನಗಳಲ್ಲಿ ಈ ಘಟನೆಗಳು ಮತ್ತಷ್ಟು ವಿಭಿನ್ನವಾಗಿ ಪುನರಾವರ್ತನೆಯಾಗಲಿವೆ” ಎಂದು ಬಿಜೆಪಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

“ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೆ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್‌ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು, ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ದವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರ್ಕಾರಕ್ಕೆ ಸಲಹೆ ನೀಡಲಿ” ಎಂದು ತಿರುಗೇಟು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...