ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ಪ್ರತಿಜ್ಞೆ: ಕಾಂಗ್ರೆಸ್ ಆಕ್ರೋಶ

Date:

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್, ಪ್ರಧಾನಿಯವರು ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ “ಸಂಪೂರ್ಣ ಮೌನದ ಪ್ರತಿಜ್ಞೆ” ತೆಗೆದುಕೊಂಡಂತೆ ತೋರುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ದೆಹಲಿಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಕಾಳಜಿ ತೋರಿದ್ದಾರೆ ಎಂದು ಕೇಳಲು ಸಂತೋಷವಾಗಿದೆ. ಆದರೆ ಇನ್ನೂ ಉರಿಯುತ್ತಿರುವ ಮಣಿಪುರದ ಹಿಂಸಾಚಾರದ ಬಗ್ಗೆಯೂ ಆಸಕ್ತಿ ತೋರಿಸಬೇಕು ಎಂದು ಪ್ರತಿಪಾದಿಸಿದರು.

“ನವದೆಹಲಿಯಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಲು ಪ್ರಧಾನಿ ಪ್ಯಾರಿಸ್‌ನಿಂದ ಗೃಹ ಸಚಿವರಿಗೆ ಕರೆ ಮಾಡಿದ್ದಾರೆ. ಅವರು ಅಂತಹ ಕಾಳಜಿ ತೋರಿದ್ದು ಒಳ್ಳೆಯದು. ಈ ಹಿಂದೆ ಮೋದಿಯವರು ಅಮೆರಿಕದಲ್ಲಿದ್ದಾಗ ಮಣಿಪುರ ಹೊತ್ತಿ ಉರಿಯುತ್ತಿತ್ತು. ಆಗ ಏಕೆ ಕರೆ ಮಾಡಿ ಪ್ರಶ್ನಿಸಲಿಲ್ಲ” ಎಂದು ಜೈರಾಮ್ ರಮೇಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

“ಪ್ರಧಾನಿ ಫ್ರಾನ್ಸ್‌ನಲ್ಲಿರುವಾಗ ಮಣಿಪುರ ಇನ್ನೂ ಉರಿಯುತ್ತಿತ್ತು. ಆದರೆ ಅವರು ಮಣಿಪುರದ ಬಗ್ಗೆ ಸಂಪೂರ್ಣ ಮೌನದ ಪ್ರತಿಜ್ಞೆ ಮಾಡಿದಂತಿದೆ” ಎಂದು ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರಲ್ಲಿ ಮೇ 3 ರಿಂದ ಶುರುವಾದ ಜನಾಂಗೀಯ ಹಿಂಸಾಚಾರದಿಂದ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಮಂದಿ ಆಸ್ತಿಪಾಸ್ತಿ ಕಳೆದುಕೊಂಡು ನಿರಾಶ್ರಿತರ ಶಿಬಿರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ನಾಗರಿಕರು ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ. ಇವೆಲ್ಲ ಘಟನೆಯ ಬಗ್ಗೆ ಕಾಂಗ್ರೆಸ್ ಪ್ರಧಾನಿಯಿಂದ ಪ್ರತಿಕ್ರಿಯೆ ಬಯಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...