ಒಡಿಶಾ | ಯುವತಿ ಮೇಲೆ ಅತ್ಯಾಚಾರ ಆರೋಪ: ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷನ ಬಂಧನ

Date:

ಸುಮಾರು 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಅಧ್ಯಕ್ಷ ಉದಿತ್ ಪ್ರಧಾನ್‌ನ ಬಂಧನ ಮಾಡಲಾಗಿದೆ. ಮಾರ್ಚ್‌ನಲ್ಲಿ ಹೋಟೆಲ್ ಕೋಣೆಯಲ್ಲಿ ಪ್ರಧಾನ್ ತನಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ಸಂತ್ರಸ್ತೆ ಆರೋಪ.

ಮಾರ್ಚ್ 18ರಂದು ಭುವನೇಶ್ವರದ ಮಾಸ್ಟರ್ ಕ್ಯಾಂಟೀನ್ ಚೌಕ್‌ನಲ್ಲಿ ಇಬ್ಬರು ಸ್ನೇಹಿತರನ್ನು ಭೇಟಿಯಾಗಿದ್ದೆ. ಕಾರಿನಲ್ಲಿ ಕೂತು ಮತ್ತೊಬ್ಬ ವ್ಯಕ್ತಿ ಬಂದು ನಮ್ಮೊಂದಿಗೆ ಸೇರಿಕೊಂಡ. ಆತ ತನ್ನನ್ನು ಉದಿತ್ ಪ್ರಧಾನ್ ಎಂದು ಪರಿಚಯಿಸಿಕೊಂಡು, ತಾನು ಎನ್‌ಎಸ್‌ಯುಐನ ಒಡಿಶಾ ವಿಭಾಗದ ಅಧ್ಯಕ್ಷನೆಂದು ಹೇಳಿಕೊಂಡ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಭುಗಿಲೆದ್ದ ಆಕ್ರೋಶ, ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದಿತ್ ನನ್ನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ನನ್ನನ್ನು ಮುಟ್ಟಲು ಆರಂಭಿಸಿದ. ಅದಾದ ಬಳಿಕ ಅವರು ನನ್ನನ್ನು ಹೋಟೆಲ್‌ಗೆ ಕರೆದೊಯ್ದರು. ಅವರು ಒಂದು ಕೋಣೆಯಲ್ಲಿ ಕೂತು ಮದ್ಯಪಾನ ಮಾಡಲು ಪ್ರಾರಂಭಿಸಿದರು. ನಾನು ಮದ್ಯ ಸೇವಿಸಿದ ಕಾರಣ ನಿರಾಕರಿಸಿದೆ. ಈ ವೇಳೆ ಉದಿತ್ ಒಂದು ಲೋಟ ತಂಪು ಪಾನೀಯ ನೀಡಿದ. ನಾನು ಅದನ್ನು ಕುಡಿದ ಬಳಿಕ ನನಗೆ ತಲೆತಿರುಗಲು ಶುರುವಾಯಿತು” ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

“ನಾನು ಕೂಡಲೇ ನನ್ನನ್ನು ಮನೆಗೆ ಬಿಡುವಂತೆ ಹೇಳಿದೆ. ಆದರೆ ನನಗೆ ಪ್ರಜ್ಞೆ ತಪ್ಪಿತು. ನನಗೆ ಪ್ರಜ್ಞೆ ಬಂದಾಗ, ಉದಿತ್ ಪ್ರಧಾನ್ ನನ್ನ ಪಕ್ಕದಲ್ಲಿ ಮಲಗಿದ್ದ. ನನಗೆ ತುಂಬ ತಲೆ ನೋವಾಗುತ್ತಿತ್ತು. ನನ್ನೊಂದಿಗೆ ಏನೋ ತಪ್ಪು ಕಾರ್ಯ ಮಾಡಲಾಗಿದೆ ಎಂಬುದು ನನ್ನ ಅರಿವಿಗೆ ಬಂತು” ಎಂದು ಸಂತ್ರಸ್ತೆ ಹೇಳಿದ್ದಾರೆ.

ಸದ್ಯ ಈ ಪ್ರಕರಣವು ರಾಜಕೀಯವಾಗಿ ತೀವ್ರ ಸಂಚಲನ ಮೂಡಿಸಿದೆ. ಒಡಿಶಾದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚಾಗುತ್ತಿರುವುದರ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್‌ ನಿರಂತರವಾಗಿ ಟೀಕಿಸುತ್ತಿದೆ. ಈ ನಡುವೆಯೇ ಅತ್ಯಾಚಾರ ಆರೋಪದಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ನಾಯಕನ ಬಂಧನವಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ | 15ರ ಬಾಲಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಶೇ. 70ರಷ್ಟು ಸುಟ್ಟ ದೇಹ

ಒಡಿಶಾದಲ್ಲಿ ಇತ್ತೀಚೆಗೆ ಅಧ್ಯಾಪಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಕಾಲೇಜು ಕ್ಯಾಂಪಸ್‌ನಲ್ಲಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಾದ ಬಳಿಕ ಶನಿವಾರ ಅಪರಿಚಿತರು 15 ವರ್ಷದ ಬಾಲಕಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಇದೀಗ ಅತ್ಯಾಚಾರ ಆರೋಪದಲ್ಲಿ ಕಾಂಗ್ರೆಸ್ ನಾಯಕನ ಬಂಧನವನ್ನು ಮುಂದಿಟ್ಟು ತಿರುಗೇಟು ನೀಡುವ ಸಾಧ್ಯತೆಯಿದೆ.

ಇನ್ನು ಬಂಧನದ ಬಳಿಕ ಎನ್‌ಎಸ್‌ಯುಐನಿಂದ ಪ್ರಧಾನ್ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಲಿಂಗ ಆಧಾರಿತ ಹಿಂಸೆಯ ವಿಚಾರದಲ್ಲಿ ಎನ್‌ಎಸ್‌ಯುಐ ಯಾವುದೇ ಸಹಿಷ್ಣುತೆ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...