ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಅಮಾನತು ಮಾಡಿದ ಕಾಂಗ್ರೆಸ್

Date:

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ತನ್ನ ಇಬ್ಬರು ಶಾಸಕರನ್ನು ಆರು ವರ್ಷಗಳ ಕಾಲ ಮೇಘಾಲಯ ಕಾಂಗ್ರೆಸ್‌ ಅಮಾನತುಗೊಳಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾಗಿದ್ದ ಚಾರ್ಲ್ಸ್ ಮಾರ್ಂಗಾರ್ (ಮಾವಾಟಿ ಕ್ಷೇತ್ರ) ಮತ್ತು ಗೇಬ್ರಿಯಲ್ ವಾಹ್ಲಾಂಗ್ (ನಾಂಗ್‌ಸ್ಟೋಯಿನ್ ಕ್ಷೇತ್ರ) ಅವರನ್ನು ಅಮಾನತುಗೊಳಿಸಿ ಮೇಘಾಲಯ ರಾಜ್ಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಾನ್ಸುಕ್ ಸೈಯೆಮ್ ಆದೇಶ ಹೊರಡಿಸಿದ್ದಾರೆ.

ಮೇಘಾಲಯದಲ್ಲಿ ಅಧಿಕಾರದಲ್ಲಿರುವ ಎಂಡಿಎ ಪಕ್ಷದೊಂದಿಗೆ ಈ ಇಬ್ಬರೂ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎಂಡಿಎ ಪಕ್ಷದೊಂದಿಗೆ ನಂಟು ಹೊಂದಿರುವುದು ಕಾಂಗ್ರೆಸ್‌ನ ಸಿದ್ಧಾಂತಗಳು ಮತ್ತು ತತ್ವಕ್ಕೆ ವಿರುದ್ಧವಾಗಿವೆ ಎಂದು ಹೇಳಲಾಗಿದೆ. ಹೀಗಾಗಿ, ಇಬ್ಬರೂ ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಇವರಿಬ್ಬರಲ್ಲದೆ, ಮತ್ತೋರ್ವ ಶಾಸಕ ಸೆಲೆಸ್ಟಿನ್ ಲಿಂಗ್ಡೋಹ್ ಕೂಡ ಎನ್‌ಪಿಪಿ ಸೇರತು ಮುಂದಾಗಿದ್ದಾರೆ ಎಂಬ ಆರೋಪಗಳಿದ್ದವು. ಮೂವರೂ ಶಾಸಕರಿಗೆ ಕಾಂಗ್ರೆಸ್‌ ನೋಟಿಸ್‌ ನೀಡಿ, ಕಚೇರಿಗೆ ಬರುವಂತೆ ಸೂಚನೆ ನೀಡಿತ್ತು. ಆದರೆ, ಲಿಂಗ್ಡೋಹ್ ಮಾತ್ರ ಕಚೇರಿಗೆ ತೆರಳಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳೆಂದು ಹೇಳಿದ್ದರು. ಉಳಿದ ಇಬ್ಬರು ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ, ಅವರಿಬ್ಬರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...