ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್

Date:

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ 12 ಗಂಟೆಗಳ ಚರ್ಚೆಯ ನಂತರ ಅಂಗೀಕರಿಸಲಾದ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024ರ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.

ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಮಸೂದೆಯನ್ನು ಪ್ರಶ್ನಿಸಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸುಪ್ರೀಂ ಕೋರ್ಟ್ ಕದ ತಟ್ಟಲಿದೆ ಎಂದು ರಾಜ್ಯ ಸಭೆಯಲ್ಲಿ ಹೇಳಿದ್ದಾರೆ. ಇದಾದ ಒಂದು ದಿನದ ಬಳಿಕ ಕಾಂಗ್ರೆಸ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. “ಕಾಂಗ್ರೆಸ್ ಶೀಘ್ರದಲ್ಲೇ ವಕ್ಫ್ (ತಿದ್ದುಪಡಿ) ಮಸೂದೆ 2024ರ ಸಾಂವಿಧಾನಿಕತೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ” ಎಂದು ತಿಳಿಸಿದ್ದಾರೆ.

“ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳು, ನಿಬಂಧನೆಗಳು ಮತ್ತು ಪಾಲಿಸುತ್ತಾ ಬಂದಿರುವ ಆಚರಣೆಗಳ ಮೇಲೆ ಮೋದಿ ಸರ್ಕಾರ ನಡೆಸುತ್ತಿರುವ ಎಲ್ಲಾ ದಾಳಿಗಳನ್ನು ನಾವು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಅಂಗೀಕರಿಸಿದ ಪ್ರಮುಖ ಮಸೂದೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಬಗ್ಗೆಯೂ ರಮೇಶ್ ಉಲ್ಲೇಖಿಸಿದ್ದಾರೆ. 2019ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು 2019ರಲ್ಲಿ ಆರ್‌ಟಿಐ ಕಾಯ್ದೆ 2005ರ ತಿದ್ದುಪಡಿಗಳ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಚುನಾವಣಾ ನಿಯಮಗಳ (2024) ತಿದ್ದುಪಡಿಗಳ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಬೇಕಿದೆ. ಮಸೂದೆ ಪರ ಮತ್ತು ವಿರುದ್ಧ ತೀವ್ರ ಚರ್ಚೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...