ಎಸ್‌ಐಆರ್ ವಿರುದ್ಧ ರಾಜಕೀಯವಾಗಿ, ಕಾನೂನುಬದ್ಧವಾಗಿ ಕಾಂಗ್ರೆಸ್ ಹೋರಾಡಲಿದೆ: ರಾಹುಲ್ ಗಾಂಧಿ

Date:

ಮತದಾನದ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧವಾಗಿ ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಎಸ್‌ಐಆರ್ ನಡೆಯುತ್ತಿರುವ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಮುಖ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಮಂಗಳವಾರ ರಾಹುಲ್ ಸಭೆ ನಡೆಸಿದ್ದು, ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, ಯಾವುದೇ ಗೊಂದಲವಿಲ್ಲದ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆದರೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಮೇಲೆ ತನ್ನ ಜವಾಬ್ದಾರಿಯನ್ನು ಹೊರಿಸಲು ಪ್ರಯತ್ನಿಸುತ್ತಿದೆ. ಎಸ್‌ಐಆರ್ ಅನ್ನು ತರಾತುರಿಯಲ್ಲಿ ನಡೆಸುತ್ತಿದೆ. ಮತದಾರರ ಹೆಸರನ್ನು ಅಳಿಸುವುದೇ ಇದರ ಹಿಂದಿನ ಉದ್ದೇಶ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ದೂರಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜ್ಯ ಘಟಕದ ಮುಖ್ಯಸ್ಥರು, ಕಾಂಗ್ರೆಸ್‌ನ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳಿದ್ದ ಈ ಸಭೆಯಲ್ಲಿ ಎಸ್‌ಐಆರ್ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ನಡೆಸಲೂ ಕಾಂಗ್ರೆಸ್ ನಿರ್ಧರಿಸಿದೆ ಎಂದು ವರದಿಯಾಗಿದೆ.

ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, “ಬಿಜೆಪಿ ಎಸ್‌ಐಆರ್ ಅನ್ನು ಮತಗಳವಿನ ಅಸ್ತ್ರಗೊಳಿಸಲು ಪ್ರಯತ್ನಿಸುತ್ತಿದೆ. ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ವಿಶ್ವಾಸ ಈಗಾಗಲೇ ಕುಸಿದಿದೆ. ಈ ಸಂದರ್ಭದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಡವಳಿಕೆ ತೀವ್ರ ನಿರಾಶಾದಾಯಕ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಎನ್‌ಡಿಎ ಬಹುಮತ ಸಾಧಿಸಿದ್ದು ಇಂಡಿಯಾ ಒಕ್ಕೂಟ ಸೋಲು ಕಂಡಿದೆ. ಇದಾದ ಬಳಿಕ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಾಗೆಯೇ ಆಯೋಗದ ಪಾತ್ರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...