ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಕಾಂಗ್ರೆಸ್‌ನಿಂದ ಶೇ.6ರಷ್ಟು ಮೀಸಲಾತಿ : ಅಮಿತ್ ಶಾ

Date:

  • ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ ಅಮಿತ್ ಶಾ
  • ಮುಸ್ಲಿಮರ ಮೀಸಲಾತಿ ಕುರಿತು ಬಿಜೆಪಿಯಿಂದ ರಾಜಕೀಯ

ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಶೇ.6ರಷ್ಟು ಮೀಸಲಾತಿ ನೀಡುವುದಾಗಿ ಹೇಳುತ್ತಿದ್ದಾರೆ. ಹಾಗಾಗಿ ಮತದಾರರು ಎಚ್ಚರಿಕೆಯಿಂದ ಮತ ಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸವದತ್ತಿಯ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಪರವಾಗಿ ಅಮಿತ್ ಶಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, “ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ದರಿಂದ ನಾವು ಮುಸ್ಲಿಮರಿಗೆ ಮೀಸಲಾತಿ ತೆಗೆದಿದ್ದೇವೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ ಕೇವಲ ವೋಟ್ ಬ್ಯಾಂಕ್‌ಗಾಗಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿತ್ತು. ನಾವು ಅದನ್ನು ರದ್ದು ಮಾಡಿ, ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ ಶೇ.2ರಷ್ಟು ಮೀಸಲಾತಿ ನೀಡಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌ ರೋಡ್‌ ಶೋ: ಜೈರಾಮ್ ರಮೇಶ್ ವ್ಯಂಗ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, “ಮುಸ್ಲಿಮರಿಗೆ ಯಾರ ಮೀಸಲಾತಿ ಕಿತ್ತುಕೊಂಡು ಕೊಡುತ್ತೀರಾ ಎಂಬುವುದನ್ನು ಸ್ಪಷ್ಟಪಡಿಸಿ ರಾಹುಲ್ ಬಾಬಾ” ಎಂದು ವ್ಯಂಗ್ಯವಾಡಿದ್ದಾರೆ.

“ರಾಹುಲ್ ಗಾಂಧಿ ಹನುಮ ಹುಟ್ಟಿದ ದಿನದ ಬಗ್ಗೆ ಕೇಳಿದ್ದಾರೆ. ಹನುಮ ಜಯಂತಿ ಯಾವಾಗ ಬರುತ್ತದೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಪಿಎಫ್‌ಐ ಬೆಂಬಲಿತ ಕಾಂಗ್ರೆಸ್ಸಿಗರಿಗೆ ನಿಮಗೆ ಗೊತ್ತಿಲ್ಲವೇ” ಎಂದು ಕೇಳಿದ್ದಾರೆ.

ಮುಸ್ಲಿಮರ ಮೀಸಲಾತಿ ರದ್ದತಿ ಪ್ರಕರಣ ಸುಪ್ರೀಂ ಕೋರ್‍ಟ್ ಮೆಟ್ಟಿಲು ಹತ್ತಿದೆ. ಆದರೂ ಬಿಜೆಪಿ ನಾಯಕರು ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...