ಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್‌ ಹೆಸರು ಹೇಳುವ ನೈತಿಕತೆ ಇಲ್ಲ: ಡಾ.ಪಿ.ಸುಧಾಕರ ರೆಡ್ಡಿ

Date:

ಅಂಬೇಡ್ಕರ್‌ ಅವರನ್ನು ನಿರಂತರವಾಗಿ ಅಪಮಾನ ಮಾಡಿದ್ದ ಕಾಂಗ್ರೆಸ್‌. ಅವರ ಹೆಸರು ಹೇಳುವ ನೈತಿಕತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಾ.ಪಿ.ಸುಧಾಕರ ರೆಡ್ಡಿ ಹೇಳಿದರು.

ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸೋಲಿನ ನಂತರ ಕಾಂಗ್ರೆಸ್‌ನವರು ಹತಾಶರಾಗಿದ್ದಾರೆ. ಡಾ. ಅಂಬೇಡ್ಕರ್‌ ಅವರನ್ನು ಲೋಕಸಭಾ ಚುನಾವಣೆಯಲ್ಲಿ 2 ಬಾರಿ ಸೋಲಿಸಿ ಅವಮಾನಿಸಿದ್ದ ಕಾಂಗ್ರೆಸ್ ಪಕ್ಷವು ಇದೀಗ ತಮ್ಮ ನಾಯಕರನ್ನು ಉಳಿಸಿಕೊಳ್ಳಲು ಅದೇ ಬಾಬಾಸಾಹೇಬರ ಹೆಸರನ್ನು ಬಳಸಿಕೊಳ್ಳುತ್ತಿದೆ” ಎಂದರು.

“ದೇಶ ವಿಭಜಿಸುವುದನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರರು ವಿರೋಧಿಸಿದ್ದರು. 370ನೇ ವಿಧಿ ಹೇರುವುದನ್ನೂ ಅವರು ವಿರೋಧಿಸಿದ್ದರು. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ದೇಶವನ್ನೇ ಜೈಲಾಗಿ ಪರಿವರ್ತಿಸಿತ್ತು ಎಂದು ಟೀಕಿಸಿದರು. ಈಗ ಕಾಂಗ್ರೆಸ್ ಮುಖಂಡರು ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡ ಕುಟುಂಬದಿಂದ ಬಂದ ವ್ಯಕ್ತಿ 10 ವರ್ಷಕ್ಕೂ ಹೆಚ್ಚು ಕಾಲ ಪ್ರಧಾನಿ ಆಗಿ ಇರುವುದನ್ನು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ರಾಹುಲ್ ಗಾಂಧಿಯವರು ತಮ್ಮದೇ ಯುಪಿಎ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವಮಾನಿಸಿದ ವ್ಯಕ್ತಿ” ಎಂದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಮಾತನಾಡಿ, “ರಾಜ್ಯದ ಎಲ್ಲ 30 ಜಿಲ್ಲೆಗಳಿಂದ ಯುವ ಮೋರ್ಚಾ ಅಧ್ಯಕ್ಷರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಕಾರ್ಯಕ್ರಮದ ಅಂಗವಾಗಿ ಸುಶಾಸನ ವಿಚಾರದಲ್ಲಿ ಡಾ.ಪಿ.ಸುಧಾಕರ ರೆಡ್ಡಿ ಅವರ ನೇತೃತ್ವದಲ್ಲಿ ಒಳ್ಳೆಯ ಕಾರ್ಯಕ್ರಮ ನಡೆದಿದೆ. ವರ್ಷ ಪೂರ್ತಿ ವಾಜಪೇಯಿಯವರ ಜನ್ಮ ಶತಮಾನೋತ್ಸವದ ಕಾರ್ಯಕ್ರಮ ಏರ್ಪಡಿಸುವ ಕುರಿತು ಚರ್ಚಿಸಲಾಗಿದೆ” ಎಂದರು.

“ಡಾ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಯಾವ ರೀತಿ ಅವಮಾನ ಮಾಡಿದೆ. ಯಾವ ರೀತಿ ಅವರನ್ನು ಅಗೌರವದಿಂದ ನಡೆಸಿಕೊಂಡಿದೆ ಎಂಬ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದರು. ಇವತ್ತು ಕಾಂಗ್ರೆಸ್ ಪಕ್ಷ ಅಂಬೇಡ್ಕರರ ಜಪ ಮಾಡುತ್ತಿದೆ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...