ಕಾಂಗ್ರೆಸ್‌ನದ್ದು 60 ಪರ್ಸೆಂಟ್‌ ವಸೂಲಿ ಸಮಾವೇಶ ಹೊರತು ನೆನಪಿನ ಜಾತ್ರೆಯಲ್ಲ: ಆರ್‌ ಅಶೋಕ್

Date:

ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್‌ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ” ಎಂದರು.

“ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷಮೆ ಯಾಚಿಸಿ

“ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿದರು.

“ಬಿಜೆಪಿ ಸಂಘಟನಾ ಸಭೆ ನಡೆದಿದ್ದು, ತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವ್ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ವರಿಷ್ಠರ ಜೊತೆ ಮಾತನಾಡಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...