ಎಲ್ಲ ಜಿಲ್ಲೆಗಳಲ್ಲೂ ‘ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ’ ಮೆರವಣಿಗೆ: ಸಚಿವ ಪ್ರಿಯಾಂಕ್ ಖರ್ಗೆ

Date:

ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಒಂದು ತಿಂಗಳ ಕಾಲ ‘ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ’ ಮೆರವಣಿಗೆ ನಡೆಯಲಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಸಿಇಒಗಳೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲಾ ಕೇಂದ್ರಗಳಿಂದ ಹೊರಡಲಿರುವ ಈ ಜಾಥಾವು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಮತ್ತು ಇತರೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಜಿಲ್ಲೆಯಲ್ಲಿ ಸಂಚರಿಸುವಂತೆ ಜಿಲ್ಲಾಡಳಿತವು ಮಾರ್ಗನಕ್ಷೆ ರೂಪಿಸಿಕೊಳ್ಳಬೆಕು” ಎಂದು ನಿರ್ದೇಶನ ನೀಡಿದರು.

“ಸಂವಿಧಾನ ರೂಪಿಸಿ 75 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಇಡೀ ರಾಜ್ಯದ ಬಹುತೇಕ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯಕ್ರಮ ರೂಪಿಸಲಾಗಿದೆ. ಸಂವಿಧಾನದ ಮಹತ್ವ ಹಾಗೂ ಈ ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಕುರಿತಂತೆ ರಾಜ್ಯದ ಮಹಿಳೆಯರು, ಯುವಜನರು ಹಾಗೂ ನಾಗರಿಕರಿಗೆ ಬಹು ಮಾಧ್ಯಮಗಳ ಮೂಲಕ ಅರಿವು ಮೂಡಿಸಲು ಈ ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮುಂದಿನ ತಿಂಗಳಲ್ಲಿ 36 ಸಾವಿರ ಮನೆ ಹಂಚಿಕೆ: ಜಮೀರ್ ಅಹಮದ್ ಖಾನ್

“ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನ ಹಾಗೂ ಜಾಥದಲ್ಲಿ ಸಂಚರಿಸಲಿರುವ ಎಲ್.ಇ.ಡಿ ವಾಹನದ ಮೂಲಕ ವಿಡಿಯೋ ಪ್ರದರ್ಶಿಸುವ ಮೂಲಕ ನಮ್ಮ ಪರಂಪರೆಯನ್ನು ಅನಾವರಣಗೊಳಿಸಲಾಗುತ್ತದೆ” ಎಂದು ತಿಳಿಸಿದರು.

“ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ಥಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಚಿಸಬೇಕೆಂದು ಸೂಚಿಸಲಾಗಿದೆ. ಇನ್ನು ರಾಜ್ಯದ ಏಳು ಜಿಲ್ಲೆಗಳ ಹತ್ತು ಸ್ಥಳಗಳಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...