ಸಂವಿಧಾನ ಬದಲಾವಣೆ | ಬಿಜೆಪಿ ಅಜೆಂಡಾದಲ್ಲಿ ಎಷ್ಟು ವಿಷ ತುಂಬಿದೆ ಎಂಬುದಕ್ಕೆ ಹೆಗಡೆ ಹೇಳಿಕೆ ಸ್ಯಾಂಪಲ್: ಡಿಕೆಶಿ ಕಿಡಿ

Date:

‌ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಎಕ್ಸ್‌ ತಾಣದಲ್ಲಿ ತೀವ್ರವಾಗಿ ಖಂಡಿಸಿ ಪೋಸ್ಟ್‌ ಮಾಡಿದ್ದು, “ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ. ಕರ್ನಾಟಕದ ಮತದಾರರೇ ಎಚ್ಚರದಿಂದಿರಿ” ಎಂದು ಡಿ ಕೆ ಶಿವಕುಮಾರ್‌ ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಂತಕುಮಾ‌ರ್‌ರನ್ನು ಪಕ್ಷದಿಂದ ಹೊರಹಾಕಲಿ: ಪರಮೇಶ್ವರ್

“ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುತ್ತಿರುವ ಸಂಸದ ಅನಂತಕುಮಾರ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂಬೇಡ್ಕರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದಾರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇಪದೆ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ” ಎಂದರು.

“ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ‌ ಅಂದರೆ ಹೇಗೆ? ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನು ಆಡಿದರೆ ಸರಿಪಡಿಸಬೇಕು. ಆದರೆ, ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೀವಿ ಎಂದು ಹೇಳಿದರೆ ಸಾಲುವುದಿಲ್ಲ. ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು.‌ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಅನಂತ ಕುಮಾರ್‌ರವರ ಸಂವಿಧಾನ ಬದಲಾವಣೆ ಹೇಳಿಕೆ ಮನುಸ್ಮೃತಿ ಜಾರಿಯ ಆಲೋಚನೆ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ: ಮಂಕಾಳ ವೈದ್ಯ

“ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ” ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.

ಕಾರವಾರದಲ್ಲಿ ಮಾತನಾಡಿದ ಅವರು, “ಅನಂತಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ ಬಿಜೆಪಿಗೆ ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ” ಎಂದರು.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅನಂತಕುಮಾರ್ ಹೆಗಡೆ, “ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...