ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ

Date:

  • ಆದಿಮ‌ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200ರ ಸಾಂಸ್ಕೃತಿಕ ಉತ್ಸವ
  • ಆದಿಮವು ಮನುಷ್ಯತ್ವದ ಪ್ರಜ್ಞೆಯನ್ನು ಎತ್ತರಿಸುತ್ತಿರುವ ಸಾಂಸ್ಕೃತಿಕ ಚಳವಳಿ: ಸಿ.ಎಂ

ನಮ್ಮ ಸಂವಿಧಾನ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಆದಿಮ‌ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200 ರ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಮಾತುಗಳನ್ನು ಆಡಿದರು.

ನಮ್ಮ ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ಮಾತ್ರ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ. ಇದನ್ನು ಜನ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಆದಿಮ ಸಾಂಸ್ಕೃತಿಕ ಚಳವಳಿ ಮೂಲಕ ಬದಲಾವಣೆಯ ಕೇಂದ್ರ ಆಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮ ಸಮಾಜ ಮತ್ತು ಮಾನವೀಯತೆಯ ಸಮಾಜವನ್ನು ಗಟ್ಟಿಗೊಳಿಸಬೇಕಾದ ಸಂದರ್ಭ ಇದಾಗಿದೆ. ಅಸಮಾನತೆ ದೈವ ಸೃಷ್ಟಿ ಅಲ್ಲ. ಮನುಷ್ಯ ಸೃಷ್ಟಿ. ಸಮಾಜದಲ್ಲಿ ಯಾರಿಗೆ ಅವಕಾಶಗಳು ಸಿಕ್ಕಿತ್ತೋ, ಅವರು ಬಹುಜನರನ್ನು ಅವಕಾಶ ವಂಚಿತರನ್ನಾಗಿ ಮಾಡಿದರು. ಇದರಿಂದ ಅಸಮಾನತೆ ಸೃಷ್ಟಿಯಾಯಿತು. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಅಸಮಾನತೆಗೆ ತುತ್ತಾದರು” ಎಂದು ಸಿದ್ದರಾಮಯ್ಯ ವಿವರಿಸಿದರು.

“ಅಸಮಾನತೆಗೆ ತುತ್ತಾದವರು ಪ್ರಜಾತಂತ್ರದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದರು. ನಮ್ಮದು ಚಲನೆ ರಹಿತ ಜಾತಿ ವ್ಯವಸ್ಥೆ. ಆದ್ದರಿಂದ ಬುದ್ದನ ಕಾಲದಿಂದಲೂ ಜಾತಿ ವ್ಯವಸ್ಥೆ ವಿರುದ್ಧ ಪ್ರಜ್ಞೆ ಮೂಡಿಸಿದರೂ ಇನ್ನೂ ಜಾತಿ ವ್ಯವಸ್ಥೆ ಗಟ್ಟಿಯಾಗುತ್ತಲೇ ಇದೆ” ಎಂದು ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದರು.

“ಪಟ್ಟಭದ್ರರು ಬಹಳ ಕೆಟ್ಟ ವ್ಯವಸ್ಥೆಯನ್ನು ರೂಪಿಸಿದ್ದಾರೆ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ ‘ಇವ ನಮ್ಮವ, ಇವ ನಮ್ಮವ’ ಎಂದು ಕರೆದರೂ ಇವತ್ತಿಗೂ “ಇವನಾರವ ಇವನಾರವ” ಎನ್ನುವ ವ್ಯವಸ್ಥೆಯೇ ಮುಂದುವರೆದಿದೆ” ಎಂದು ವಿವರಿಸಿದ ಸಿಎಂ, “ಸ್ವಾರ್ಥರು, ಅಧಿಕಾರಕ್ಕೆ ಅಂಟಿಕೊಳ್ಳುವವರು ಪಟ್ಟಭದ್ರರ ವ್ಯವಸ್ಥೆ ಜತೆಗೆ ರಾಜಿ ಮಾಡಿಕೊಳ್ಳುತ್ತಾರೆ. ಇದರಿಂದ ಸಮಾಜ ಸಾಕಷ್ಟು ನೋವು ತಿನ್ನುತ್ತದೆ. ಕಟ್ಟ ಕಡೆಯ ಮನುಷ್ಯನಿಗೆ ದಕ್ಕಬೇಕಾದ ಪಾಲನ್ನು ದಕ್ಕದಂತೆ ಮಾಡುತ್ತದೆ” ಎಂದರು.

“ಕಾಯಕ ಮಾಡುವವರು ಅವಕಾಶಗಳಿಂದ ವಂಚಿತರಾಗುತ್ತಾರೆ. ಯಾರು ಕಾಯಕ ಜೀವಿಗಳಲ್ಲವೋ ಅವರು ಸಂಪತ್ತನ್ನು ಅನುಭವಿಸುತ್ತಿದ್ದಾರೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿ ಆಗಬೇಕು. ಉತ್ಪಾದನೆಯನ್ನು ಸಮವಾಗಿ ಹಂಚಿಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಶೋಷಣೆ ಮುಕ್ತ ಸಮಾಜ ಸೃಷ್ಟಿಯಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಶೋಷಿತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇದೇ ಸಂದರ್ಭದಲ್ಲಿ ಆದಿಮ ನಡೆದು ಬಂದ ಹಾದಿಯನ್ನು ದಾಖಲಿಸಿರುವ ನೆನಪಿನ ಸಂಚಿಕೆಯನ್ನು ಸಿಎಂ ಬಿಡುಗಡೆಗೊಳಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ನಂಜೇಗೌಡರು, ಕೊತ್ತನೂರು ಮಂಜುನಾಥ್, ಅನಿಲ್ ಕುಮಾರ್, ಮಾಜಿ ಸಭಾಪತಿ ಸುದರ್ಶನ್, ಮಾಜಿ ಸಚಿವರಾದ ಶ್ರೀನಿವಾಸ ಗೌಡ ಮತ್ತು ಆದಿಮ ಸಾಂಸ್ಕೃತಿಕ ಸಂಘಟನೆಯ ಪದಾಧಿಕಾರಿಗಳು, ಪೋಷಕರು ಮತ್ತು ದಲಿತ ಚಳವಳಿಯ ಹೋರಾಟಗಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...