ಜಮೀನು ಸ್ವಾಧೀನ ವ್ಯಾಜ್ಯ ಬಗೆಹರಿಸಲು ʼಸಮಾಲೋಚನಾ ಅದಾಲತ್ʼ: ವಸತಿ ಸಚಿವ ಜಮೀರ್ ಅಹ್ಮದ್‌

Date:

  • ಗೃಹಮಂಡಳಿ ಬಡಾವಣೆಗಳಲ್ಲಿ ಬಲ್ಕ್ ಅಲಾಟ್ ಮೆಂಟ್‌ಗೆ ಕ್ರಮ
  • ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಮಾಡಿ ಸಮಸ್ಯೆ ಆಲಿಸುವೆ

ಕರ್ನಾಟಕ ಗೃಹ ಮಂಡಳಿ ಯೋಜನೆಗಳ ಜಮೀನು ವ್ಯಾಜ್ಯ ಬಗೆಹರಿಸಿ ಕಾಮಗಾರಿ ತ್ವರಿತಗೊಳಿಸಲು ಜಮೀನು ಮಾಲೀಕರ ಜತೆ ʼಸಮಾಲೋಚನಾ ಅದಾಲತ್ʼ ನಡೆಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.

ಕರ್ನಾಟಕ ಗೃಹ ಮಂಡಳಿಯಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಮಂಡಳಿ ಯೋಜನೆಗಳ ಜಮೀನು ವ್ಯಾಜ್ಯ ಪರಿಹಾರಕ್ಕೆ ಲೋಕ್ ಅದಾಲತ್ ಮಾದರಿ ಸಮಾಲೋಚನಾ ಅದಾಲತ್ ಮಾಡಲು ನಿರ್ಧರಿಸಿರುವುದಾಗಿ ಹೇಳಿದರು.

ಸೂರ್ಯ ನಗರ ಯೋಜನೆ ಸೇರಿದಂತೆ ಗೃಹಮಂಡಳಿಯ ಹತ್ತು ಯೋಜನೆಗಳಿಗೆ 4,615 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಪೈಕಿ ಸೂರ್ಯ ನಗರ ನಾಲ್ಕನೇ ಹಂತದ 700 ಎಕರೆ ಸೇರಿದಂತೆ ಒಟ್ಟು ಒಂದು ಸಾವಿರ ಎಕರೆಗೆ ಸಂಬಂಧಿಸಿದ ವ್ಯಾಜ್ಯದಿಂದ ಉಳಿದ ಹತ್ತು ಯೋಜನೆಗಳಿಗೂ ಗ್ರಹಣ ಹಿಡಿದಂತಾಗಿದೆ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಸಮಸ್ಯೆ ಪರಿಹಾರಕ್ಕಾಗಿ ರೈತರು ಹಾಗೂ ಜಮೀನು ಮಾಲೀಕರ ಜತೆ ಸಮಾಲೋಚನೆ ನಡೆಸಿ ವಿವಾದ ಇತ್ಯರ್ಥಪಡಿಸಿ ಯೋಜನೆಗಳಿಗೆ ವೇಗ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವರು ತಿಳಿಸಿದರು.

ಜಮೀನು ಸ್ವಾಧೀನ ಸೇರಿ ನ್ಯಾಯಾಲಯಗಳಲ್ಲಿ ಇರುವ ಪ್ರಕರಣ ವರ್ಷಗಟ್ಟಲೆ ನಡೆಯುತ್ತಿದೆ. ಇದಕ್ಕೆ ಕಾರಣ ಏನು ಎಲ್ಲಿ ಲೋಪ ಆಗುತ್ತಿದೆ ಎಂಬ ಬಗ್ಗೆ ಮಾಹಿತಿ ಪಡೆಯಲು ಕಾನೂನು ವಿಭಾಗದ ಜತೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಕಾಲದ ಎಪಿಎಂಸಿ ಕಾಯ್ದೆ ರದ್ದು, ಹಳೆ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

ಬಲ್ಕ್ ಅಲಾಟ್ ಮೆಂಟ್

ರಾಜ್ಯದ ಹಲವೆಡೆ ಗೃಹ ಮಂಡಳಿ ವತಿಯಿಂದ ರಚಿಸಿರುವ ಬಡಾವಣೆಗಳಲ್ಲಿ ಮನೆ ಹಾಗೂ ನಿವೇಶನಗಳಿಗೆ ಬೇಡಿಕೆ ಇಲ್ಲದಿರುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಡಾವಣೆಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.

ಜಿಲ್ಲಾ ಮಟ್ಟದ ಜನತಾ ದರ್ಶನ ವೇಳೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಸಮಸ್ಯೆ ಬಗ್ಗೆ ಅಧ್ಯಯನ ಮಾಡಿ ಮೂಲ ಸೌಕರ್ಯ ಕೊರತೆ ಮತ್ತಿತರ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲಾಗುತ್ತದೆ. ಅಗತ್ಯವಾದರೆ ಕೆಲವು ರಿಯಾಯಿತಿ ನೀಡಿ ಗೃಹ ಮಂಡಳಿ ನಿವೇಶನ, ಮನೆಗಳಿಗೆ ಬೇಡಿಕೆ ಬರುವಂತೆ ಮಾಡಲಾಗುವುದು ಎಂದು ಜಮೀರ್ ಅಹ್ಮದ್ ಹೇಳಿದರು.

ಮುಂದುವರೆದು ಮಾತನಾಡಿದ ಅವರು ಸರ್ಕಾರಿ ನೌಕರರ ಸಂಘ ಸೇರಿದಂತೆ ಸಂಘ ಸಂಸ್ಥೆಗಳಿಗೆ ವಸತಿ, ಭೂಮಿಯನ್ನು ಸಗಟು ಹಂಚಿಕೆ (ಬಲ್ಕ್ ಅಲಾಟ್ ಮೆಂಟ್) ಮಾಡುವುದರ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...