ಕಲುಷಿತ ನೀರಿನ ದುರಂತ ಮರುಕಳಿಸಿದರೆ ಸಿಇಒ ಅಮಾನತು: ಮುಖ್ಯಮಂತ್ರಿ ಎಚ್ಚರಿಕೆ

Date:

  • ಜನರ ಜೀವದ ಜತೆ ಆಡಬೇಡಿ, ಸ್ಥಳ ಪರಿಶೀಲನೆ ಮಾಡಿ
  • ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರುಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.

“ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನು ಮಾಡುತ್ತಿದ್ದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ತನಿಖೆಗೆ ಆದೇಶ

ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೊ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

“ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...