ಗುತ್ತಿಗೆದಾರ ಸಚಿನ್‌ರದ್ದು ಸರ್ಕಾರಿ ಯೋಜಿತ ಆತ್ಮಹತ್ಯೆ: ಬಿವೈ ವಿಜಯೇಂದ್ರ ಆರೋಪ

Date:

ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವರ, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಸರಣಿ ಆತ್ಮಹತ್ಯೆಗಳು ನಡೆದಿರುವುದನ್ನು ಹಿಂದೆಂದೂ ನಾವು ಕೇಳಿಲ್ಲ, ನೋಡಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿದೆ. ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ” ಎಂದು ಟೀಕಿಸಿದರು.

“ಡೆತ್‌ನೋಟ್‌ನಲ್ಲಿ ಎಳೆಎಳೆಯಾಗಿ ಎಲ್ಲಾ ಮಾಹಿತಿಯನ್ನು ಬಿಚ್ಚಿಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬರೆದ ಡೆತ್‌ನೋಟ್‌ ಆತನೇ ಬರೆದಿರುವುದಾದರೆ ಅದರಲ್ಲಿ ಇರುವ ಅಂಶಗಳು ಎಂದಿಗೂ ಸುಳ್ಳಾಗಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಬೀದರ್‌ | ‌ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ರಾಜು ಕಪನೂರು ಅವರು, ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಆರೋಪಿ ಇದ್ದ ಫೋಟೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಿಡುಗಡೆ ಮಾಡಿದರು. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಇದೇ ಸಂದರ್ಭದಲ್ಲಿ ವಿಜಯೇಂದ್ರ ಆಗ್ರಹಿಸಿದರು. ಹಾಗೆಯೇ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡದಿದ್ದರೆ ಜನವರಿ 4 ರಂದು ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತೇವೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇನ್ನು ನಿನ್ನೆ (ಭಾನುವಾರ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಸಂಜೆ ಸಚಿನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...