ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಖರ್ಗೆ

Date:

ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಕಾರಣ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಆದರೆ “ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ, ನಾನು ಮಾತ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಹಾಗೆಯೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬುದು ವಿಪಕ್ಷಗಳ ಆಗ್ರಹವಾಗಿದೆ.

ಇದನ್ನು ಓದಿದ್ದೀರಾ? ಗುತ್ತಿಗೆದಾರ ಸಚಿನ್‌ರದ್ದು ಸರ್ಕಾರಿ ಯೋಜಿತ ಆತ್ಮಹತ್ಯೆ: ಬಿವೈ ವಿಜಯೇಂದ್ರ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಎಷ್ಟೇ ಚೀರಾಡಿಕೊಳ್ಳಲಿ, ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಾನು ಈ ಹಿಂದೆಯೂ ಹೇಳಿದ್ದೇನೆ. ಮೊದಲು ಸಾಕ್ಷಿ ತೋರಿಸಿ ನಂತರ ಮಾತನಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡುವುದಲ್ಲ” ಎಂದು ಹೇಳಿದರು.

“ಡಿಸೆಂಬರ್ 27ರಂದೇ ಗೃಹ ಸಚಿವರು, ಸಿಎಂಗೆ ಮನವಿ ಮಾಡಿದ್ದೇನೆ. ಈ ಪ್ರಕರಣದಲ್ಲಿ ಸ್ವತಂತ್ರ ತನಿಖೆ ಆಗಲಿ ಎಂದು ಹೇಳಿದ್ದೆ. ಸಿಎಂ ಭೇಟಿ ಮಾಡಿ ಮಾಹಿತಿ ನೀಡಿದ್ದೇನೆ, ಗೃಹ ಸಚಿವರನ್ನೂ ಕೂಡ ಭೇಟಿ ಮಾಡಿದ್ದೇನೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ತೇಜೋವಧೆ ಖಂಡನೀಯ: ವಸಂತ್ ಕುಮಾರ್

“ಇನ್ನು ರಾಜು ಕಪನೂರ್ ನನ್ನ ಆಪ್ತನಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಬಿಜೆಪಿ ನಾರ್ತ್ ಅಭ್ಯರ್ಥಿ ಚಂದು ಪಾಟೀಲ್ ಜೊತೆಗೆ ರಾಜು ಕಪನೂರ್ ಇರುವ ಫೋಟೋ ನಮ್ಮ ಬಳಿಯೂ ಇದೆ. ಯಾಕೆಂದರೆ ಅವರು ಕಾಂಗ್ರೆಸ್‌ಗೆ ಬರುವ ಮುನ್ನ ಬಿಜೆಪಿಯಲ್ಲಿದ್ದರು. ರಾಜು ಕಪನೂರ್ ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು” ಎಂದರು.

“ನಾವು ಲಾಜಿಕ್ ಆಗಿಯೇ ಮಾತನಾಡುತ್ತಿದ್ದೇವೆ. ವಿಜಯೇಂದ್ರ ವಿರುದ್ದ ಮನಿ ಲಾಂಡರಿಂಗ್ ಪ್ರಕರಣ ಆಗಿದೆಯಲ್ಲ. ಹಾಗಿದ್ದರೆ ಅವರು ಯಾಕೆ ರಾಜೀನಾಮೆ ನೀಡುತ್ತಿಲ್ಲ” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...