ಕಾಮಗಾರಿಗಳ ಹಣ ತಡೆಹಿಡಿಯದಂತೆ ಸಿಎಂಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಯೋಗದ ಮನವಿ

Date:

ಬಿಜೆಪಿ ಸರ್ಕಾರ ಅನುಮೋದಿಸಿದ್ದ ಕಾಮಗಾರಿಗಳನ್ನು ಕೈಗೊಳ್ಳದಂತೆ ಹಾಗೂ ಮುಗಿದಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಗುತ್ತಿಗೆದಾರರ ಸಂಘ ಮನವಿ ಮಾಡಿದೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರು 40% ಕಮಿಷನ್‌ ಪಡೆಯುತ್ತಿದ್ದಾರೆಂದು ಗುತ್ತಿಗೆದಾರರು ಆರೋಪಿಸಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘ಪೇ-ಸಿಎಂ’ ಅಭಿಯಾನವನ್ನೂ ನಡೆಸಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಕಮಿಷನ್‌ ದಂಧೆಗೆ ಕಡಿವಾಣ ಹಾಕಲು, ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳಿಗೂ ತಡೆಯೊಡ್ಡಿದೆ. ಆದರೆ, ಇದರಿಂದ ಗುತ್ತಿಗೆದಾರರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಗುತ್ತಿಗೆದಾರರ ಸಂಘ ಹೇಳಿಕೊಂಡಿದೆ.

ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಗುತ್ತಿಗೆದಾರರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. “ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ” ಎಂದು ಸಂಘವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ನಮ್ಮ ಸಚಿವರು | ಕೆ ಎಚ್ ಮುನಿಯಪ್ಪ: ದಲಿತ ರಾಜಕಾರಣದ ಅನಪೇಕ್ಷಿತ ಮಾದರಿಯೇ?

“ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ, ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲು ಯಾವುದೇ ತಡೆಯೊಡ್ಡಬಾರದು” ಎಂದು ಮನವಿ ಮಾಡಿದೆ.

“ಸರ್ಕಾರ ಹೊರಡಿಸಿರುವ ಕಾಮಗಾರಿ ತಡೆಯ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಬೇಕು” ಎಂದು ನಿಯೋಗ ಮನವಿ ಮಾಡಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...