ಜು. 15ರ ಒಳಗೆ ಬಾಕಿ ಬಿಲ್‌ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ ಎಚ್ಚರಿಕೆ

Date:

ಬಾಕಿ ಇರುವ ಬಿಲ್‌ಗಳನ್ನು ಜುಲೈ 15ರೊಳಗೆ ಪಾವತಿಸುವಂತೆ ಒತ್ತಾಯಿಸಿ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಬಿಜೆಪಿ ಸರ್ಕಾರ ಆರಂಭಿಸಿದ್ದ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಆದೇಶಿಸಿದ್ದು, ಬಿಲ್​​ಗಳ ಮಂಜೂರಾತಿ ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಈ ವೇಳೆ, ಬಿಲ್‌ಗಳನ್ನು ಮಂಜೂರು ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಜೂನ್ 26ರಂದು ಆದೇಶ ಹೊರಡಿಸಿದ್ದರೂ ಬಿಲ್‌ ಮಂಜೂರಾಗಿಲ್ಲ ಎಂದು ಸಿಎಂಗೆ ಸಂಘದ ಪತ್ರದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದೇಶವಿದ್ದರೂ ಅಧಿಕಾರಿಗಳು ಸರ್ಕಾರದಿಂದ ಯಾವುದೇ ಸುತ್ತೋಲೆ ಬಂದಿಲ್ಲ ಎಂದು ಹೇಳಿ ಬಿಲ್‌ಗಳನ್ನು ತೆರವುಗೊಳಿಸಲು ನಿರಾಕರಿಸುತ್ತಿದ್ದಾರೆ ಎಂದು ಸಂಘವು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಕುಮಾರಣ್ಣ, ಪದೇ ಪದೇ ಯಾಕೆ ನನ್ನ ಹಾಸನದ ಶಾಸಕ ಅಂತ ಕರೀತೀರಾ, ನಂಗೆ ಹೆಸರಿಲ್ವಾ?: ಶಿವಲಿಂಗೇಗೌಡ

ಇದೀಗ ಗುತ್ತಿಗೆದಾರರು ಮುಖ್ಯಮಂತ್ರಿಗೆ ಪತ್ರ ಬರೆದು, ಹಲವು ಗುತ್ತಿಗೆದಾರರು ಆರ್ಥಿಕ ಸಂಕಷ್ಟದಲ್ಲಿದ್ದು ಬಿಲ್‌ಗಳನ್ನು ಮಂಜೂರು ಮಾಡಲು ಹೊಸದಾಗಿ ಆದೇಶ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಜುಲೈ 15ರ ಒಳಗೆ ಬಾಕಿ ಬಿಲ್‌ಗಳನ್ನು ಮಂಜೂರು ಮಾಡದಿದ್ದರೆ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಗುತ್ತಿಗೆದಾರರ ಸಂಘವು ಎಚ್ಚರಿಕೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...