ಜಿಲ್ಲಾಧಿಕಾರಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಶಾಸಕ ರವಿಕುಮಾರ್‌ಗೆ ಹೈಕೋರ್ಟ್ ತರಾಟೆ

Date:

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಎನ್‌ ರವಿಕುಮಾರ್ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ.

ಹೇಳಿಕೆ ವಿರುದ್ಧ ದಾಖಲಾದ ಎಫ್‍ಐಆರ್ ರದ್ದು ಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಈ ವೇಳೆ ರವಿಕುಮಾರ್ ಅವರನ್ನು ಪೀಠ ತೀವ್ರ ತರಾಟೆಗೆ ತೆಗೆದುಕೊಂಡಿತು. ಭಾರತೀಯ ಸೇನೆಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರ ವಿರುದ್ಧ ಹೇಳಿಕೆ ಗಮನಿಸಿದ್ದೀರಿ ಅಲ್ವಾ? ಆ ಸಚಿವರ ಹೇಳಿಕೆಗೆ ಮಧ್ಯಪ್ರದೇಶ ಹೈಕೋರ್ಟ್ ಆದೇಶ ಮಾಡಿರುವುದು ಗೊತ್ತಿದೆಯಾ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೇ ನಿಮ್ಮ ಹೇಳಿಕೆ ಅನಗತ್ಯವಾದದ್ದು. ನೀವು ಈ ರೀತಿ ಹೇಳಿಕೆ ಕೊಡಬಾರದು ಎಂದು ಕೋರ್ಟ್ ತಾಕೀತು ಮಾಡಿದೆ.

ರವಿಕುಮಾರ್ ಪರ ವಕೀಲರು, ಅವರು ಕ್ಷಮೆಯಾಚಿಸುತ್ತಾರೆ ಎಂದು ಕೋರ್ಟ್‍ಗೆ ಮನವಿ ಮಾಡಿದರು. ಕ್ಷಮೆಯಾಚನೆಯನ್ನು ಪ್ರಮಾಣ ಪತ್ರದ ಮೂಲಕ ಸಲ್ಲಿಸಲು ಕೋರ್ಟ್ ಸೂಚನೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವಿಕುಮಾರ್ ಅವರನ್ನು ಬಂಧಿಸುವುದಿಲ್ಲ. ಅವರು ತನಿಖೆಗೆ ಸಹಕರಿಸಲಿ ಎಂದು ಎಸ್‍ಪಿಪಿ ಜಗದೀಶ್ ಹೈಕೋರ್ಟ್‍ಗೆ ತಿಳಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಜೂನ್ 19 ಕ್ಕೆ ವಿಚಾರಣೆ ಮುಂದೂಡಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್‌. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ನಾಲಿಗೆ ಹರಿಬಿಟ್ಟಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದು ಅವಹೇಳನ ಮಾಡಿದ್ದರು.

ಇದರ ಬೆನ್ನಲ್ಲೇ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರವಿಕುಮಾರ್‌ ಅವರ ಹೇಳಿಕೆ ವಿರುದ್ಧ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...