ವಿವಾದಾತ್ಮಕ ಹೇಳಿಕೆ | ಬಂಧನ ಭೀತಿಯ ನಡುವೆ ಹೈಕೋರ್ಟ್‌ ಮೆಟ್ಟಿಲೇರಿದ ನಟ ಉಪೇಂದ್ರ

Date:

ವಿವಾದಾತ್ಮಕ ಹೇಳಿಕೆ ನೀಡಿ ಬಂಧನ ಭೀತಿ ಎದುರಿಸುತ್ತಿರುವ ನಟ ಉಪೇಂದ್ರ, ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಉಪೇಂದ್ರ ಅವರ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ಪ್ರತ್ಯೇಕ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ಮೊದಲ ಎಫ್ಐಆರ್ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಆಗಿದ್ದರೆ, ಎರಡನೇ ಎಫ್‌ಐಆರ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಮೊದಲ ದೂರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದರೆ, ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಅವರು ಎರಡನೇ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾದಾತ್ಮಕ ಹೇಳಿಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ತಕ್ಷಣ ಉಪೇಂದ್ರ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಜೊತೆಗೆ, ವಾಟ್ಸಪ್‌ನಲ್ಲೂ ಕೂಡ ಕಳುಹಿಸಿ, ಉತ್ತರ ನೀಡುವಂತೆ ಸೂಚಿಸಿದ್ದರು. ಆದರೆ ಅದಕ್ಕೆ ಉಪೇಂದ್ರ ಅವರು ಉತ್ತರಿಸಿಲ್ಲ ಎಂದು ತಿಳಿದುಬಂದಿದೆ.

ಅಲ್ಲದೆ, ವಿವಿಪುರಂ ವಿಭಾಗದ ಎಸಿಪಿ ನಾಗರಾಜ್​ ಅವರ ನೇತೃತ್ವದ ಪೊಲೀಸರ ತಂಡವು ಕತ್ರಿಗುಪ್ಪೆಯಲ್ಲಿರುವ ಉಪೇಂದ್ರ ಅವರ ನಿವಾಸಕ್ಕೆ ತೆರಳಿ ಸ್ಥಳ ಮಹಜರು ಕೂಡ ನಡೆಸಿದ್ದಾರೆ.

‘ಉಪೇಂದ್ರ ಅವರು ಮನೆಯಲ್ಲಿರಲಿಲ್ಲ. ಅವರು ನಾಪತ್ತೆಯಾಗಿರುವುದಾಗಿ’ ಪೊಲೀಸರೊಂದಿಗೆ ಸ್ಥಳ ಮಹಜರಿಗೆ ತೆರಳಿದ್ದ ದೂರುದಾರರಲ್ಲೋರ್ವರಾದ ಸಮತಾ ಸೈನಿಕ ದಳದ ಗೋಪಾಲ ಗಿರಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಹೊಲೆಗೇರಿ’ ಹೇಳಿಕೆ | ನಟ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್, ವಿಚಾರಣೆಗೆ ಹಾಜರಾಗಲು ನೋಟಿಸ್

ಈ ನಡುವೆ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ತಾನು ಉದ್ದೇಶಪೂರ್ವಕವಾಗಿ ಯಾರಿಗೂ ನೋವನ್ನುಂಟು ಮಾಡುವಂತೆ ಮಾತನಾಡಿಲ್ಲ. ಗಾದೆ ಮಾತನ್ನು ಉಲ್ಲೇಖಿಸುವ ಸಂದರ್ಭದಲ್ಲಿ ಆ ಮಾತು ಬಂದಿದೆ. ಹೇಳಿಕೆ ತಪ್ಪಾಗಿದೆ ಅಂತ ತಿಳಿದ ಕೂಡಲೇ ಕ್ಷಮೆ ಕೇಳಿದ್ದೇನೆ ಹಾಗೂ ವಿಡಿಯೋ ಡಿಲೀಟ್ ಕೂಡ ಮಾಡಿದ್ದೇನೆ. ಎಲ್ಲ ಸಮುದಾಯದ ಬಗ್ಗೆ ಗೌರವಿಟ್ಟುಕೊಂಡಿರುವ ವ್ಯಕ್ತಿ ನಾನು’ ಎಂದು ಹೈಕೋರ್ಟಿಗೆ ಈಗಾಗಲೇ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...