ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕನ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ

Date:

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಚಯ್ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ನಿವಾಸದ ಎದುರು ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಜಯ್ ಅವರ ಭಾವಚಿತ್ರಕ್ಕೆ ಹೂವಿನ ಹಾರ, ಬಳೆ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ, ಬೆಳಗಾವಿ ತಾಲೂಕಿನ ಹಿಂಡಲಗಾದಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಡಿದ್ದ ಸಂಜಯ್, “ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಸಮಾವೇಶದಲ್ಲಿ ಅತೀ ಹೆಚ್ಚು ಮಹಿಳೆಯರು ಭಾಗಿಯಾಗಿದ್ದೀರಿ. ಇದರಿಂದ ಅವರಿಗೆ ಇಂದು ರಾತ್ರಿ ನಿದ್ದೆ ಬರುವುದಿಲ್ಲ. ಅದರಲ್ಲೂ ರಮೇಶ್ ಜಾರಕಿಹೊಳಿ ಕೂಡ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಅವರು ಮಾತ್ರೆ ಜೊತೆಗೆ ಒಂದು ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್‌ ಕಾರ್ಯಕರ್ತರು ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯ ವಿಡಿಯೋ ಮಾಡುತ್ತಿದ್ದ ಸಂಜಯ್ ಅವರ ಕಾರು ಚಾಲಕನನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆ, ಸಂಜಯ್ ನಿವಾಸ ಬಳಿ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ತೆರಳಿ, ಪ್ರತಿಭಟನಾಕಾರರ ಮನವೊಲಿಸಲು ಯತ್ನನಿಸಿದ್ದಾರೆ. ಆದರೆ, ಸಂಜಯ್ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...