ಸಹಕಾರಿ ಬ್ಯಾಂಕ್ ಹಗರಣ: ಮುಕ್ತಾಯ ವರದಿ ಅಂಗೀಕಾರ; ಅಜಿತ್ ಪವಾರ್ ಸೇರಿ ಹಲವರು ಖುಲಾಸೆ

Date:

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ (MSCB) 25,000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಮುಂಬೈ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ದಿ. ಅಜಿತ್ ಪವಾರ್ ಸೇರಿದಂತೆ ಹಲವರನ್ನು ಖುಲಾಸೆಗೊಳಿಸಲಾಗಿದೆ.

ಮಹಾರಾಷ್ಟ್ರ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು (EOW) ಇತ್ತೀಚೆಗೆ ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿತ್ತು. ಪ್ರಕರಣದಲ್ಲಿ ಯಾವುದೇ ಕ್ರಿಮಿನಲ್ ಅಪರಾಧ ಕಂಡುಬಂದಿಲ್ಲ. ಬ್ಯಾಂಕ್‌ನ ಸಾಲಗಳು ಮತ್ತು ವಸೂಲಿಗಳಲ್ಲಿಯೂ ಯಾವುದೇ ಅಕ್ರಮಗಳು ಕಂಡುಬಂದಿಲ್ಲ ಎಂದು ಹೇಳಿತ್ತು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಜಿಲ್ಲಾ ಬ್ಯಾಂಕ್‌ಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಮಾಜಿ ಉಪಮುಖ್ಯಮಂತ್ರಿ ದಿ. ಅಜಿತ್ ಪವಾರ್, ಅವರ ಪತ್ನಿ – ಹಾಲಿ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಹಾಗೂ ಇತರ ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಲು ಶಿಫಾರಸು ಮಾಡಿತ್ತು.

ಇದೀಗ, ಇಒಡಬ್ಲ್ಯೂ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಮುಕ್ತಾಯ ವರದಿಯನ್ನು ಪ್ರಶ್ನಿಸಿ ಮತ್ತು ಆಪಾದಿತ ಹಗರಣದ ತನಿಖೆ ಮುಂದುವರೆಸಬೇಕೆಂದು ಕೋರಿ ಅಣ್ಣಾ ಹಜಾರೆ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಎಪ್‌ಸ್ಟೀನ್‌ ಪ್ರಕರಣ: ಟ್ರಂಪ್ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕಡತಗಳೇ ನಾಪತ್ತೆ

ಜಿಲ್ಲಾ ಮತ್ತು ಸಹಕಾರಿ ಬ್ಯಾಂಕುಗಳು ಸಹಕಾರಿ ಸಕ್ಕರೆ ಕಾರ್ಖಾನೆಗಳು, ನೂಲುವ ಗಿರಣಿಗಳು ಹಾಗೂ ಇತರ ಸಂಸ್ಥೆಗಳಿಗೆ ನಿಯಮಗಳನ್ನು ಉಲ್ಲಂಘಿಸಿ ಸಾಲಗಳನ್ನು ನೀಡಿವೆ. ಇಲ್ಲಿ ಬೃಹತ್ ಹಗರಣ ನಡೆದಿದೆ. ಸಾಲ ವಿತರಣೆಯಲ್ಲಿನ ಅಕ್ರಮಗಳಿಂದಾಗಿ ಜನವರಿ 2007 ಮತ್ತು ಡಿಸೆಂಬರ್ 2017 ರ ನಡುವೆ ರಾಜ್ಯವು 25,000 ಕೋಟಿ ರೂ. ನಷ್ಟವನ್ನು ಅನುಭವಿಸಿದೆ ಎಂದು ಆರೋಪಿಸಲಾಗಿತ್ತು. ಬಾಂಬೆ ಹೈಕೋರ್ಟ್ ನಿರ್ದೇಶನದಂತೆ 2019ರಲ್ಲಿ ಹಗರಣದ ಕುರಿತು ತನಿಖೆ ಪ್ರಾರಂಭಿಸಲಾಗಿತ್ತು. ಆಗ ಜಿಲ್ಲಾ ಬ್ಯಾಂಕುಗಳಲ್ಲಿ ಅಜಿತ್ ಪವಾರ್ ನಿರ್ದೇಶಕಾಗಿದ್ದರು. ಪವಾರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳು, MSCBಯ ಅಂದಿನ ನಿರ್ದೇಶಕರ ವಿರುದ್ಧ ಎಫ್‌ಐಆರ್‌ಅನ್ನೂ ದಾಖಲಿಸಲಾಗಿತ್ತು.

ಆದರೆ, 2020ರಲ್ಲಿ ಪ್ರಕರಣದ ತನಿಖೆಯು ಹಲವು ತಿರುವುಗಳನ್ನು ಪಡೆದುಕೊಂಡಿತು. ಯಾವುದೇ ಕ್ರಿಮಿನಲ್ ಅಪರಾಧವಿಲ್ಲ ಎಂದು ಇಒಡಬ್ಲ್ಯೂ ಮುಕ್ತಾರ ವರದಿ ಸಲ್ಲಿಸಿತು. ಆ ನಂತರ, 2022ರಲ್ಲಿ, ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿ, ಎನ್‌ಸಿಪಿಯನ್ನು ವಿಭಜಿಸಿ ಅಜಿತ್ ಪವಾರ್ ಅವರು ತಮ್ಮ ಬಣದೊಂದಿಗೆ ಬಿಜೆಪಿ ಜೊತೆ ಸೇರಿ ‘ಮಹಾಯುತಿ’ ಸರ್ಕಾರ ರಚಿಸಿದರು. ಆ ನಂತರ, ಅಜಿತ್ ವಿರುದ್ಧದ ಹಲವು ಪ್ರಕರಣಗಳು ದುರ್ಬಲಗೊಂಡವು ಎಂಬುದು ಗಮನಾರ್ಹ ಸಂಗತಿ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ಒಂದು ತಿಂಗಳ ನಂತರ ಮುಕ್ತಾಯ ವರದಿ ಅಂಗೀಕಾರಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...