ನಿಗಮಗಳಲ್ಲಿ ಸಾಲ ಸಿಗುತ್ತಿಲ್ಲ, ಜನರು ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ: ಆರ್‌ ಅಶೋಕ್

Date:

ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ” ಎಂದು ದೂರಿದರು.

“ಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್‌ ನೀಡಬೇಕು. ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್‌ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್‌ ರೂಮ್‌ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್‌ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆಂದು ಪ್ರಧಾನಿ ಮೋದಿ ಹೇಳಿದ್ದು ಈಗ ನಿಜವಾಗಿದೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆ” ಎಂದು ಪ್ರಶ್ನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

“ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಹಣ ಕೊಡಬೇಕಿದೆ. ಇದರ ಜೊತೆಗೆ ಬೆಂಗಳೂರಿಗೆ ಅನುದಾನ ನೀಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಳಿದ್ದಾರೆ. ಈಗ ಮೈಕ್ರೋ ಫೈನಾನ್ಸ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಂತೆ. ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡುವುದಾದರೆ ಇಲ್ಲಿ ಕಾಂಗ್ರೆಸ್‌ ಏಕೆ ಅಧಿಕಾರದಲ್ಲಿದೆ? ಎಂದು ಕೇಳಿದರು.

ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ‌ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ” ಎಂದರು.

“ಪ್ರತಿ ಬಜೆಟ್‌ನಲ್ಲೂ ಅನುದಾನ ಶೇ.20 ರಷ್ಟು ಹೆಚ್ಚಾಗಬೇಕು. 2022-23 ರಲ್ಲಿ ಬಿಜೆಪಿ ಸರ್ಕಾರ ಕೃಷಿ ಇಲಾಖೆಗೆ 7,288 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ ಸರ್ಕಾರ 5,035 ಕೋಟಿ ರೂ. ನೀಡಿದೆ. ಅಂದರೆ 2,253 ಕೋಟಿ ರೂ. ಕೊರತೆಯಾಗಿದೆ. ಇದು ರೈತರ ಬದುಕಿನ ಮೇಲೆ ಪರಿಣಾಮ ಬೀರಿದೆ. ತೋಟಗಾರಿಕಾ ಇಲಾಖೆಗೆ ಬಿಜೆಪಿ 1,374 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 1,207 ಕೋಟಿ ರೂ. ನೀಡಿದೆ. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಸಹಕಾರಿ ಎಲ್ಲ ಸೇರಿ ಬಿಜೆಪಿ 15,383 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 14,768 ಕೋಟಿ ರೂ. ನೀಡಿದೆ. ಇದರಿಂದ 614 ಕೋಟಿ ರೂ. ಕೊರತೆಯಾಗಿದೆ. ಕಂದಾಯ ಇಲಾಖೆಗೆ ಬಿಜೆಪಿ 1534 ಕೋಟಿ ರೂ.ನೀಡಿದರೆ, ಕಾಂಗ್ರೆಸ್‌ನಿಂದ 940 ಕೋಟಿ ರೂ. ನೀಡಲಾಗಿದೆ. 594 ಕೋಟಿ ರೂ. ಕೊರತೆಯಾಗಿದೆ. ಲೋಕೋಪಯೋಗಿ ಇಲಾಖೆಗೆ ಬಿಜೆಪಿ 12,410 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 9,699 ಕೋಟಿ ರೂ. ನೀಡಲಾಗಿದೆ. 2,710 ಕೋಟಿ ರೂ. ಕೊರತೆಯಾಗಿದೆ. ನೀರಾವರಿಗೆ ಬಿಜೆಪಿ 19,610 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 16,834 ಕೋಟಿ ರೂ. ನೀಡಿದೆ. ಇದರಿಂದ 2755 ಕೋಟಿ ರೂ. ಕೊರತೆಯಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...