ನಾಗ್ಪುರ ಹಿಂಸಾಚಾರ | ಹಾನಿಯ ನಷ್ಟ ಗಲಭೆಕೋರರಿಂದ ವಸೂಲಿ: ಮಹಾರಾಷ್ಟ್ರ ಸಿಎಂ ಫಡ್ನವೀಸ್

Date:

ಇತ್ತೀಚಿನ ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಆಸ್ತಿ ಹಾನಿಯ ನಷ್ಟವನ್ನು ಸರ್ಕಾರವು ಗಲಭೆಕೋರರಿಂದ ವಸೂಲಿ ಮಾಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

ಹಿಂಸಾಚಾರ ಮಾಡಿದ ಅಪರಾಧಿಗಳು ಈ ಹಾನಿಯ ನಷ್ಟವನ್ನು ನೀಡಲು ವಿಫಲವಾದರೆ ಅವರ ಆಸ್ತಿ ವಶಪಡಿಸಿಕೊಳ್ಳಲಾಗುವುದು. ಬಳಿಕ ಅವರ ಆಸ್ತಿ ಮಾರಾಟ ಮಾಡಿ ಈ ಹಾನಿಯ ನಷ್ಟವನ್ನು ನಾವು ತುಂಬುತ್ತೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ನಾಗ್ಪುರ ಹಿಂಸಾಚಾರ | ವಿಎಚ್‌ಪಿ, ಬಜರಂಗ ದಳದ ಮುಖಂಡರೂ ಸೇರಿ 78 ಮಂದಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂಸಾಚಾರದ ವೇಳೆ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ಮಾಡಿದವರ ಮೇಲೆ ನಾವು ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ. ಈ ದಾಳಿಯನ್ನು ನಾವು ಗುಪ್ತಚರ ವೈಫಲ್ಯ ಎಂದು ಹೇಳಲಾಗುವುದಿಲ್ಲ. ಆದರೆ ಗುಪ್ತಚರ ನಿರ್ವಹಣೆ ಉತ್ತಮವಾಗಿರಬಹುದಿತ್ತು ಎಂದು ಹೇಳಬಹುದು” ಎಂದು ಫಡ್ನವೀಸ್ ಒತ್ತಿ ಹೇಳಿದ್ದಾರೆ.

ಈವರೆಗೆ ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 104 ಜನರನ್ನು ಗುರುತಿಸಲಾಗಿದ್ದು, 12 ಅಪ್ರಾಪ್ತ ವಯಸ್ಕರು ಸೇರಿದಂತೆ 92 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್‌ 17ರಂದು ಛತ್ರಪತಿ ಸಂಭಾಜಿನಗರದಲ್ಲಿ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಡೆಸಿದ ಪ್ರತಿಭಟನೆಯ ವೇಳೆ ಮುಸ್ಲಿಮರ ಪವಿತ್ರ ಗ್ರಂಥವನ್ನು ಸುಡಲಾಗಿದೆ ಎಂಬ ವದಂತಿಯೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ. ಸುಮಾರು 33 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮುಖಂಡರು, ಮುಸ್ಲಿಂ ಮುಖಂಡರು ಸೇರಿದಂತೆ ಒಟ್ಟು 105 ಮಂದಿಯನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ನಾಗ್ಪುರ ಹಿಂಸಾಚಾರ ಪೂರ್ವಯೋಜಿತ, ‘ಛಾವಾ’ ಚಿತ್ರದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ: ಫಡ್ನವೀಸ್

ಇನ್ನು ಮಾರ್ಚ್‌ 30ರಂದು ನಾಗ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹಿಂಸಾಚಾರದಿಂದಾಗಿ ನಿಗದಿಪಡಿಸಿದ ಭೇಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಿಎಂ ಹೇಳಿದ್ದಾರೆ.

ಈ ಹಿಂದೆ ಸಂಭಾಲ್ ಹಿಂಸಾಚಾರದ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವೂ ಹಾನಿಯ ವೆಚ್ಚವನ್ನು ಪ್ರತಿಭಟನಾಕಾರರಿಂದ ವಸೂಲಿ ಮಾಡಲಾಗುವುದು. ಅವರ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂದು ಹೇಳಿತ್ತು. ಆದರೆ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಅರೋಪಿಯ ಬದಲಾಗಿ ಆಸ್ತಿ ಕಿತ್ತುಕೊಂಡು ಆರೋಪಿಯ ಪೂರ್ಣ ಕುಟುಂಬಕ್ಕೆ ಶಿಕ್ಷೆ ವಿಧಿಸುವುದು ಸರಿಯಲ್ಲ ಎಂಬ ವಾದ ಕೇಳಿಬಂದಿತ್ತು. ಹಾಗೆಯೇ ಈ ಪೈಕಿ ಹಲವು ಮಂದಿ ನಿರಪರಾಧಿಗಳು, ನಿರಪರಾಧಿಗಳ ಆಸ್ತಿಯನ್ನು ಕಿತ್ತುಕೊಂಡಂತೆ ಆಗುತ್ತದೆ ಎಂದು ನೆಟ್ಟಿಗರು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...