ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ: ಆಸ್ತಿ ಮುಟ್ಟುಗೋಲಿಗೆ ಕೋರ್ಟ್‌ ಆದೇಶ

Date:

  • ಶಾಸಕರ ಮೇಲಿನ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ
  • ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಆಸ್ತಿಪಾಸ್ತಿಗಳ ಮುಟ್ಟುಗೋಲಿಗೆ ಸೂಚನೆ

ಗಂಗಾವತಿ ಶಾಸಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಗೆ ಮರಳಿ ಸಂಕಷ್ಟ ಆರಂಭವಾಗಿದೆ.

ಶಾಸಕರ ಈ ಹಿಂದಿನ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ.

ಜನಪ್ರತಿನಿಧಿಗಳ ನ್ಯಾಯಲಯದ ನ್ಯಾಯಮೂರ್ತಿ ಜಯಂತ್​ ಕುಮಾರ್ ಆದೇಶ ಹೊರಡಿಸಿದ್ದಾರೆ. ಜನಾರ್ದನ ರೆಡ್ಡಿ 2009 ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳ ಜಪ್ತಿಗೆ ಸೂಚನೆ ನೀಡಲಾಗಿದೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿರುವ ಮತ್ತು ಅರುಣಾ ಲಕ್ಷ್ಮಿ ಹೆಸರಲ್ಲಿ ಇರುವ 77 ಆಸ್ತಿಗಳ ಜಪ್ತಿ ಮಾಡುವಂತೆ ಕೋರ್ಟ್​ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಸ್‌ ಸಂಖ್ಯೆ​ 135/2013ರ ಅಂತಿಮ ಆದೇಶ ಆಗುವವರೆಗೂ ಆಸ್ತಿ ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ. ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳು ಬಗ್ಗೆ ಸರಿಯಾದ ದಾಖಲೆ ನೀಡಲು ಕೋರ್ಟ್​ ಕೋರಿದೆ.

ರೆಡ್ಡಿಗೆ ಸೇರಿರುವ ಒಟ್ಟು 124 ಆಸ್ತಿಗಳ ಜಪ್ತಿಗೆ ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ ಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ?:ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ: ಆರೋಗ್ಯ ಸಚಿವರಿಂದ ಸನ್ಮಾನ

ಇನ್ನು ಸಿಬಿಐ ಅಧಿಕಾರಿಗಳು ಪ್ರಕರಣದ ತನಿಖೆ ವೇಳೆ ಆಸ್ತಿಗಳನ್ನ ಗುರುತಿಸಿಕೊಂಡಿದ್ದರು. 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು.

ರೆಡ್ಡಿಯಷ್ಟೇ ಅಲ್ಲದೆ ಅವರ ಪತ್ನಿ ಅರುಣಾ ಅವರ ಒಡೆತನ, ಪಾಲುದಾರಿಕೆಯಲ್ಲಿರುವ ಆಸ್ತಿಗಳನ್ನೂ ಮುಟ್ಟುಗೋಲು ಹಾಕಲು ನ್ಯಾಯಾಲಯ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...