ಬೇಲೂರು ಜೆಡಿಎಸ್‌ ಶಾಸಕ ಎಸ್‌ ಲಿಂಗೇಶ್‌ ವಿರುದ್ಧ ದೂರು ದಾಖಲಿಸುವಂತೆ ಕೋರ್ಟ್‌ ಆದೇಶ

Date:

  • ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ
  • ಜು.7ರೊಳಗೆ ವರದಿ ಸಲ್ಲಿಸುವಂತೆ ಬೇಲೂರು ಠಾಣಾಧಿಕಾರಿಗೆ ನಿರ್ದೇಶನ

ಭೂ ಮಂಜೂರಾತಿ ವೇಳೆ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಕೆ ಎಸ್‌ ಲಿಂಗೇಶ್‌ ಮೇಲೆ ಎಫ್‌ಐಆರ್‌ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ಹೊರಡಿಸಿದೆ.

ಬೇಲೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ 2,750 ಎಕರೆ 86 ಗುಂಟೆ ಸರ್ಕಾರಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಬಲಾಢ್ಯರಿಗೆ, ಅನರ್ಹರಿಗೆ, ಅಪ್ರಾಪ್ತರಿಗೆ ಹಾಗೂ ಬೆಂಗಳೂರಿನ ರಿಯಲ್‌ ಎಸ್ಟೇಟ್ ವ್ಯಕ್ತಿಗಳಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಗಾಂಧಿ ನಗರ ನಿವಾಸಿ ಕೆ ಸಿ ರಾಜಣ್ಣ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಾಸಕ ಕೆ ಎಸ್‌ ಲಿಂಗೇಶ್‌ ಹಾಗೂ ಇತರೆ 15 ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಖಾಸಗಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ದಹಿ ವಿವಾದ | ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವ ʼಭಂಡ ಬಾಳುʼ ಬಿಜೆಪಿಗೆ ಮಾತ್ರ ಸಾಧ್ಯ: ಕಾಂಗ್ರೆಸ್‌ ಕಿಡಿ

ರಾಜ್ಯದ ಶಾಸಕರು ಹಾಗೂ ಸಂಸದರ ವಿರುದ್ಧ ನಡೆಯುವ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಯುವ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ನ್ಯಾಯಾಧೀಶೆ ಜೆ ಪ್ರೀತ್‌ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದರು.

ಕೋಲಾರದ ವ್ಯಕ್ತಿಯ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು ಶಾಸಕರ ಮೇಲೆ ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 156 (3)ರ ಅಡಿಯಲ್ಲಿ ತನಿಖೆ ನಡೆಸಿ, ಎಲ್ಲ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 468, 465, 464, 420, 471, 120 ಬಿ ಹಾಗೂ 409ರ ಅನ್ವಯ ಕಾನೂನು ಕ್ರಮ ಜರುಗಿಸಿ, ಇದೇ ವರ್ಷದ ಜುಲೈ 7ರ ಒಳಗೆ ವರದಿ ಸಲ್ಲಿಸುವಂತೆ ಬೇಲೂರು ಪೊಲೀಸ್ ಠಾಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...