ದನದ ಕೆಚ್ಚಲು ಕೊಯ್ದ ಪ್ರಕರಣ‌ | ರಾಜ್ಯ ಸರಕಾರದ ಧೋರಣೆಯೇ ಕಾರಣ: ಬಿ ವೈ ವಿಜಯೇಂದ್ರ ಆರೋಪ

Date:

ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡ ಇಂದು (ಜ.14) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತ್ತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.

“ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ” ಎಂದು ವಿಜಯೇಂದ್ರ ಖಂಡಿಸಿದರು. “ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ” ಎಂದು ಅವರು ತಿಳಿಸಿದರು.

“ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೊಂದು ಧರ್ಮಯುದ್ಧ: ಆರ್‌ ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಹಿಂದೂ-ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಗೂಂಡಾಗಿರಿ ಸರಕಾರ, ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು” ಎಂದು ಟೀಕಿಸಿದರು.

“ಆರೋಪಿ ಮತಿಭ್ರಮಣೆಗೆ ಒಳಗಾದವ ಎಂದು ಕಾಂಗ್ರೆಸ್ಸಿಗರು ಕಥೆ ಹೆಣೆದಿದ್ದಾರೆ. ಆತ 10 ವರ್ಷಗಳಿಂದ ಅವರ ಅಣ್ಣನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಆತ ಮದ್ಯಪಾನ ಮಾಡಿದ್ದರೆ ಅಷ್ಟು ಹೊತ್ತು ಬಾರ್ ತೆರೆದಿರಲು ಹೇಗೆ ಸಾಧ್ಯ? ಮುಂಜಾನೆ 3 ಅಥವಾ 4ರ ಹೊತ್ತಿಗೆ ಇಂಥ ದುಷ್ಕೃತ್ಯ ಮಾಡಲು ಹೇಗೆ ಸಾಧ್ಯ? ಸುಮಾರು 500 ಕೋಟಿಗೂ ಹೆಚ್ಚು ಮೌಲ್ಯದ ಜಾಗದ ದನದ ಆಸ್ಪತ್ರೆ ಇಲ್ಲಿದೆ. ಈ ಜಾಗವನ್ನು ಸರಕಾರವು ವಕ್ಫ್ ಬೋರ್ಡಿಗೆ ನೀಡಿದೆ. ಅದರ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿ ಕರ್ಣ ಇದ್ದು, ಕರ್ಣನ ಹಸುಗಳ ಕೆಚ್ಚಲು ಕತ್ತರಿಸುವ ಮೂಲಕ ಕರ್ಣನಿಗೂ ಎಚ್ಚರಿಕೆ ನೀಡಿದ್ದಾರೆ” ಎಂದರು.

“ಒಬ್ಬರೇ ಮಾಡಿದ ಕೃತ್ಯ ಇದಲ್ಲ. ಇದರ ಹಿಂದಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೊಂದು ಧರ್ಮಯುದ್ಧ; ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡಲಿದೆ” ಎಂದು ಪ್ರಕಟಿಸಿದರು.

ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...