ಸಿ ಪಿ ಯೋಗೇಶ್ವರ್ ಬಿಜೆಪಿ‌ ಬಿಟ್ಟರೆ, ಕಾಂಗ್ರೆಸ್‌ ಸೇರುವ ಪ್ರಶ್ನೆ ಉದ್ಭವ: ಡಿಸಿಎಂ ಡಿ ಕೆ ಶಿವಕುಮಾರ್

Date:

ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.‌

ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳು ‘ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿದ್ದಾರಲ್ಲ’ ಎಂದು ಕೇಳಿದಾಗ, ”ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದ್ದಾರೆ. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ” ಎಂದರು.

”ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, ”ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದರು.

”ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ. 300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

”ಕೆಲವು ಅಪಾರ್ಟ್‌ಮೆಂಟ್‌ಗಳನ್ನು 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್ ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಇಬ್ಬರು ಮಕ್ಕಳು ಕೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದಾಗ, ”ನಾನು ಈ ವಿಚಾರ ನೋಡಿದೆ. ಆ ತಾಯಿಯ ಗೋಳು ಕಂಡೆ. ಮಕ್ಕಳ ಶೋಧ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...