ಸಚಿವ ಜಮೀರ್‌ ಅಹಮದ್‌ ಹೇಳಿಕೆಯಿಂದ ನಷ್ಟವಾಗಿದೆ: ಸಿ ಪಿ ಯೋಗೇಶ್ವರ್

Date:

ಹೆಚ್‌ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್‌ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಹೇಳಿದರು.

ಚನ್ನಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸಂಪೂರ್ಣವಾಗಿ ಹೋರಾಡಿದ್ದೇನೆ. ಆದರೆ, ದೇವೇಗೌಡರು ಮೊಮ್ಮಗನನ್ನು ಗೆಲ್ಲಿಸಿಕೊಂಡು ಬರಲು ಶಪಥ ಮಾಡಿದಂತೆ ಕಾಣುತ್ತಿದೆ. ಅವರ ಕೊನೆಗಳಿಗೆಯ ಪ್ರಚಾರ ಜೆಡಿಎಸ್‌ಗೆ ಲಾಭವಾಗಿದೆ” ಎಂದರು.

“ಕುಮಾರಸ್ವಾಮಿ ಅವರು ಕ್ಷೇತ್ರ ಉಳಿಸಿಕೊಳ್ಳಲು ಸಾಕಷ್ಟು ತಂತ್ರಗಳನ್ನು ಮಾಡಿದ್ದಾರೆ. ದೇವೇಗೌಡರ ಕಣ್ಣೀರು ಅದು ಬೇರೆಯೇ ಕೆಲಸ ಮಾಡುತ್ತದೆ. ದೇವೇಗೌಡರನ್ನು ಬೈದರೆ ಸಹಿಸಿಕೊಳ್ಳದೇ ಇರುವ ಮತದಾರರು ಇದ್ದಾರೆ. ಕಾಂಗ್ರೆಸ್‌ ಇಲ್ಲಿ ಗೆಲ್ಲುವ ವಾತಾವರಣ ಇರಲಿಲ್ಲ. ನಾನು ಪಕ್ಷೇತರವಾಗಿ ಗೆದ್ದಿದ್ದೇನೆ. ಇನ್ನೂ ಆತ್ಮಸಾಕ್ಷಿ ಕುಗ್ಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಡಳಿತ ಪಕ್ಷ ನಮ್ಮದಿದೆ. ರಾಜ್ಯದಲ್ಲಿ ಸರ್ಕಾರದ ಗ್ಯಾರಂಟಿಗಳು ಕೂಡ ಕ್ಷೇತ್ರದಲ್ಲಿ ಪರಿಣಾಮ ಬೀರಿವೆ. ನಮ್ಮ ಕಾಂಗ್ರೆಸ್‌ ನಾಯಕರು ನನ್ನ ಬೆನ್ನಿಗೆ ನಿಂತು ಸಾಕಷ್ಟು ಹೋರಾಟ ಮಾಡಿದ್ದಾರೆ. ಫಲಿತಾಂಶ ಏನಾಗುತ್ತೋ ಕಾದು ನೋಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ಒಕ್ಕಲಿಗ ಜನರು ದೇವೇಗೌಡರ ಕುಟುಂಬಕ್ಕೆ ಅಂಟಿಕೊಂಡಿದ್ದಾರೆ. ಯಾವಾಗ ನಮ್ಮನ್ನು ಒಪ್ಪಿಕೊಳ್ಳುತ್ತಾರೋ ಅವಾಗ ನಾವು ಸಮುದಾಯದ ನಾಯಕರಾಗಲು ಸಾಧ್ಯ. ನೋಡೋಣ ಮುಂದೆ” ಎಂದು ತಿಳಿಸಿದರು.

ಚನ್ನಪಟ್ಟಣ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್‌ ಅಹಮದ್‌ ಅವರು ಕಾಲಾ ಕುಮಾರಸ್ವಾಮಿ ಎಂದು ಲೇವಡಿ ಮಾಡಿದ್ದರು. ಚುನಾವಣೆಯಲ್ಲಿ ಜೆಡಿಎಸ್‌ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಒಕ್ಕಲಿಗರನ್ನು ಜಮೀರ್‌ ನಿಂದಿಸಿದ್ದಾರೆ ಎಂದು ಪ್ರಚಾರ ಮಾಡಲಾಯಿತು. ನಂತರ ಮೈಸೂರಿನಲ್ಲಿ ಜಮೀರ್‌ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...