ಸಿ ಪಿ ಯೋಗೇಶ್ವರ್ ಕಾಟಾಚಾರಕ್ಕೆ ಬಿಜೆಪಿ ಜೊತೆ ಇದ್ದರು‌ ಅನ್ನಿಸುತ್ತದೆ: ಆರ್‌ ಅಶೋಕ್‌ ಕಿಡಿ

Date:

ಮಾಜಿ ಸಚಿವ ಸಿ ಪಿ ಯೋಗೇಶ್ವರ್​ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಪ್ರತಿಕ್ರಿಯಿಸಿದ್ದು, “ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟುಕೊಂಂಡವರು. ಕಾಟಾಚಾರಕ್ಕೆ ಬಿಜೆಪಿ ಜೊತೆ ಇದ್ದರು ಅನ್ನಿಸುತ್ತೆ” ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಿ ಪಿ ಯೋಗೇಶ್ವರ್ ಅವರು ಬಿಜೆಪಿಯ ಕಟ್ಟಾಳು ಅಲ್ಲ. ಆದರೂ ​ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಕಾಂಗ್ರೆಸ್‌ ಸೇರಿದ್ದಾರೆ” ಎಂದು ಟೀಕಿಸಿದರು.

“ಯೋಗೇಶ್ವರ್‌ ಅವರು ಕಾಂಗ್ರೆಸ್ ಸೇರಿ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್​ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್​ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿ ಪಿ ಯೋಗೇಶ್ವರ್​ ಗುರುತು ಸೈಕಲ್. ಬಿಎಸ್​ಪಿ ಎಲ್ಲ ಮುಗಿಸಿಕೊಂಡು ನಮ್ಮ ಪಕ್ಷಕ್ಕೆ ಬಂದವರು. ಅವರು ಸೈದ್ಧಾಂತಿಕವಾಗಿ ನಮ್ಮ ಪಕ್ಷದಲ್ಲಿ ಇದ್ದವರಲ್ಲ. ಚನ್ನಪಟ್ಟಣದಲ್ಲಿ ಬಿಜೆಪಿ ‌ಮತ ಅಲ್ಲೇ ಇರುತ್ತೆ. ನಾನು, ಪ್ರಲ್ಹಾದ್ ಜೋಶಿ ಅವರು ಜೆಡಿಎಸ್‌ಗೆ ಟಿಕೆಟ್ ಅಂತ ಅವರಿಗೆ ಹೇಳಿದ್ದೇವೆ. ಕುಮಾರಸ್ವಾಮಿ ಅವರು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೇಳಿದ್ದರು. ಆದರೆ, ಸಿ ಪಿ ಯೋಗೇಶ್ವರ್​ ಒಪ್ಪಲಿಲ್ಲ” ಎಂದು ವಿವರಿಸಿದರು.

“ಯೋಗೇಶ್ವರ್‌ ನಡೆ ಪಕ್ಷಕ್ಕೆ ದ್ರೋಹ ಬಗೆದಂತೆ. ರಾಜ್ಯದ ಎಲ್ಲ ಬಿಜೆಪಿ ನಾಯಕರು ಅವರ ಪರವಾಗಿ ಇದ್ದೆವು. ಬಿಜೆಪಿ ಚಿಹ್ನೆ, ಜೆಡಿಎಸ್ ಚಿಹ್ನೆ ಅಂತಲ್ಲ. ಎನ್​ಡಿಎ ಗೆಲ್ಲುವುದು ಮುಖ್ಯ. ಎನ್‌ಡಿಎನಲ್ಲಿ ಅವರಿಗೆ ಸೀನಿಯಾರಿಟಿ ಇತ್ತು. ಈಗ ಹೋಗಿ ಲಾಸ್ಟ್​​ನಲ್ಲಿ ಕೂತಿದ್ದಾರೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...