ವಯನಾಡ್‌ | ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Date:

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭ್ಯರ್ಥಿಯಾಗಿದ್ದು, ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರ ವಿರುದ್ಧ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಸ್ಪರ್ಧಿಸಿದ್ದಾರೆ. ಅವರೂ ಕೂಡ ಬುಧವಾರ ನಾಮಪತ್ರ ಸಲ್ಲಿಸಿದರು.

“ಎಲ್‌ಡಿಎಫ್ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ನೋಡಿದರೆ ಗೊತ್ತಾಗುತ್ತಿದೆ. ಇಂದು ನಾಮಪತ್ರ ಸಲ್ಲಿಕೆಯ ಅತ್ಯಂತ ಮಹತ್ವದ ದಿನ ಎಂದು ನಮಗೆಲ್ಲರಿಗೂ ಸಂತೋಷವಾಗಿದೆ” ಎಂದು ರೋಡ್ ಶೋನಲ್ಲಿ ಭಾಗವಹಿಸಿದ ವೇಳೆ ಅನ್ನಿ ರಾಜಾ ಹೇಳಿದರು.

ವಯನಾಡ್‌ನಲ್ಲಿ ಪ್ರಮುಖ ಅಭ್ಯರ್ಥಿಯಾಗಿರುವ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಿದ ಅನ್ನಿ ರಾಜಾ, “ಕಾಂಗ್ರೆಸ್‌ ಅಭ್ಯರ್ಥಿಯ ಅದೃಷ್ಟದ ಬಗ್ಗೆ ನಾನು ಚಿಂತಿಸುವುದಿಲ್ಲ. ರಾಷ್ಟ್ರೀಯ ವಿಷಯಗಳ ಬಗ್ಗೆ ತಮ್ಮ ಪಕ್ಷದ ನಿಲುವಿನ ಬಗ್ಗೆ ಜನರಿಗೆ ತಿಳಿಸುವ ಮೂಲಕ ನಾವು ಜನರನ್ನು ತಲುಪುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಡರಂಗದ ಅಭ್ಯರ್ಥಿಯಾಗಿ ನಾನು ಇಲ್ಲಿ ಗೆಲ್ಲಲು ಸ್ಪರ್ಧಿಸುತ್ತಿದ್ದೇನೆ. ಕಾಂಗ್ರೆಸ್‌ ಅಭ್ಯರ್ಥಿಯ  ಬಹುಮತ ಅಥವಾ ಅವರ ಹಣೆಬರಹ ಏನೆಂಬುದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಇಲ್ಲೇ ಇದ್ದೇವೆ, ಜನರನ್ನು ಸುಲಭವಾಗಿ ತಲುಪುತ್ತಿದ್ದೇವೆ. ನಮ್ಮ ರಾಜಕೀಯ ಏನು, ಎಲ್ಲ ರಾಷ್ಟ್ರೀಯ ವಿಷಯಗಳ ಬಗ್ಗೆ ನಮ್ಮ ನಿಲುವು, ಫ್ಯಾಸಿಸಂ, ಸಂಘ ಪರಿವಾರ ಎಲ್ಲದರ ಕುರಿತು ಜನರ  ಪ್ರತಿಕ್ರಿಯೆಯೊಂದಿಗೆ ನಮ್ಮ ಗೆಲುವಿನ ವಿಶ್ವಾಸವಿದೆ” ಎಂದು ಸಿಪಿಐ ಅಭ್ಯರ್ಥಿ ಹೇಳಿದರು.

ವಯನಾಡ್‌ ನಿರ್ಲಕ್ಷ್ಯದ ಬಗ್ಗೆ ರಾಹುಲ್ ಗಾಂಧಿಯನ್ನು ದೂರಿದ ಅವರು “ಕಳೆದ ಚುನಾವಣೆಗೆ ಮೊದಲು ಜನರು ನನ್ನ ಬಳಿಗೆ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವುದಿಲ್ಲವೆಂದು ಹೇಳುತ್ತಿದ್ದರು, ಆದರೆ ಅವರು ಪ್ರಧಾನಿಯಾಗುತ್ತಾರೆಂದು ಹೇಳಿ ಮತ ಚಲಾಯಿಸುವಂತೆ ತಿಳಿಸಲಾಗಿತ್ತು. ಆದ್ದರಿಂದ ಅವರು ಕಳೆದ ಬಾರಿ ಕಾಂಗ್ರೆಸ್‌ಗೆ ಮತ ಹಾಕಿದರು. ಆದರೆ ಏನಾಯಿತು” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

“ವಯನಾಡ್ ಎಂಬ ಹೆಸರು ಮಲಯಾಳಂನಲ್ಲಿ ಕೇವಲ ನಾಲ್ಕು ಅಕ್ಷರಗಳನ್ನು ಹೊಂದಿದೆ. ಐದು ವರ್ಷಗಳಲ್ಲಿ ಅವರು ಒಮ್ಮೆಯೂ ತಮ್ಮ ಕ್ಷೇತ್ರದ ಹೆಸರನ್ನು ಉಚ್ಚರಿಸಿಲ್ಲ” ಎಂದು ಆರೋಪಿಸಿದರು.

ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಲಿರುವ ದಿನವೇ ಅನ್ನಿ ರಾಜಾ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅನ್ನಿ ರಾಜಾ ಅವರು ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...