ಪ್ರತಿದಿನ ಅರ್ಧ ಗಂಟೆ ಫೋನ್, ಲ್ಯಾಪ್‌ಟಾಪ್ ಆಫ್: ಗಾಝಾ ಪರ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ನೀಡಿದ ಸಿಪಿಐಎಂ

Date:

ಗಾಝಾ ಪರವಾಗಿ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಭಾರತೀಯ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರೆ ನೀಡಿದೆ. ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಎಂ.ಎ. ಬೇಬಿ ಅವರು ಗಾಜಾ ಯುದ್ಧವನ್ನು ಪ್ರತಿಭಟಿಸಿ ಒಂದು ವಾರ ‘ಡಿಜಿಟಲ್ ಸತ್ಯಾಗ್ರಹ’ ನಡೆಸಲು ಕರೆ ನೀಡಿದ್ದಾರೆ.

ಶನಿವಾರ ರಾತ್ರಿಯಿಂದ ಪ್ರತಿದಿನ ರಾತ್ರಿ 9ರಿಂದ ರಾತ್ರಿ 9.30ರವರೆಗೆ ಜನರು ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್ ಅಥವಾ ಡೆಸ್ಕ್‌ಟಾಪ್‌ಗಳಂತಹ ತಮ್ಮ ಸಾಧನಗಳನ್ನು ಸ್ವಿಚ್ ಆಫ್ ಮಾಡುವಂತೆ ಸಿಪಿಐಎಂ ನಾಯಕರು ಒತ್ತಾಯಿಸಿದ್ದಾರೆ. ಈ ಮೂಲಕ ಇಸ್ರೇಲ್ ಅನ್ನು ಬೆಂಬಲಿಸುತ್ತಿರುವ ವಿಶ್ವದ ಕಾರ್ಪೊರೇಟ್‌ಗಳ ಆರ್ಥಿಕತೆಗೆ ಪೆಟ್ಟು ನೀಡಿ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಿಪಿಐ(ಎಂ)ಗೆ ಎಂ ಎ ಬೇಬಿ ಸಾರಥ್ಯ; ಪಕ್ಷವನ್ನು ತಳಮಟ್ಟದಿಂದ ಕಟ್ಟುವರೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಝಾದಲ್ಲಿ ಲಕ್ಷಾಂತರ ಜನರನ್ನು ಹಸಿವಿನ ಸಾವಿಗೆ ದೂಡುತ್ತಿರುವ, ಯುದ್ಧಕ್ಕೇನೂ ಸಂಬಂಧವಿಲ್ಲದ ಹತ್ತಾರು ಸಾವಿರ ಮಹಿಳೆ, ಮಕ್ಕಳನ್ನು ಕೊಂದ ಇಸ್ರೇಲ್‌ನ ಅಮಾನುಷ ಸಾಮೂಹಿಕ ಜನ ಹತ್ಯೆಯ ವಿರುದ್ಧ ನಿಮ್ಮ ಮನ ಮಿಡಿಯುತ್ತಿದೆಯಲ್ಲವೇ? ಹಾಗಿದ್ದರೆ ದಯವಿಟ್ಟು ಈ ಡಿಜಿಟಲ್ ಸತ್ಯಾಗ್ರಹದಲ್ಲಿ ಭಾಗವಹಿಸಿ. ಜಗತ್ತಿನ ಕೋಟ್ಯಾಂತರ ಜನರೊಂದಿಗೆ ಭಾರತದ ದನಿ ಜೋಡಿಸಿ” ಎಂದು ಸಿಪಿಐಎಂನ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ಯ ಹರಿದಾಡುತ್ತಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಂಎ ಬೇಬಿ ಅವರು, “ಗಾಝಾಗಾಗಿ ಡಿಜಿಟಲ್ ಸತ್ಯಾಗ್ರಹ. ನಾವು ಸಾಮಾನ್ಯ ನಾಗರಿಕರೂ ಗಾಝಾದಲ್ಲಿ ಇಸ್ರೇಲ್ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಏನಾದರೂ ಮಾಡಬಹುದು ಎಂಬುದನ್ನು ಬಲವಾಗಿ ನಾವು ತೋರಿಸಬೇಕು. ಯಾವುದೇ ಸಾಮಾಜಿಕ ಮಾಧ್ಯಮ, ಸಂದೇಶಗಳು, ಕಾಮೆಂಟ್‌ಗಳು ಅರ್ಧ ಗಂಟೆ ಇರದು” ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರ ಫ್ರಾನ್ಸೆಸ್ಕಾ ಅಲ್ಬನೀಸ್ ಅವರು ಇತ್ತೀಚೆಗೆ ಒಂದು ವರದಿಯನ್ನು ಬಿಡುಗಡೆ ಮಾಡಿದ್ದಾರೆ. ವರದಿ ಪ್ರಕಾರ ಗೂಗಲ್, ಅಮೆಜಾನ್, ಮೈಕ್ರೋಸಾಫ್ಟ್ ಮತ್ತು ಐಬಿಎಂನಂತಹ 48 ಪ್ರಮುಖ ತಂತ್ರಜ್ಞಾನ ಕಂಪನಿಗಳು ಗಾಝಾ ಯುದ್ಧದಿಂದ ಲಾಭ ಗಳಿಸುತ್ತಿದೆ. ಅಂತಹ ಒಂದು ಸಾವಿರಕ್ಕೂ ಅಧಿಕ ಕಾರ್ಪೋರೇಟ್‌ ಘಟಕಗಳ ಪಟ್ಟಿಯನ್ನು ಈ ವರದಿಯಲ್ಲಿ ಮಾಡಲಾಗಿದೆ. ಈ ವರದಿ ಬೆನ್ನಲ್ಲೇ ಸಿಪಿಐಎಂ ಡಿಜಿಟಲ್ ಸತ್ಯಾಗ್ರಹಕ್ಕೆ ಕರೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...