ಇಂಡಿಯಾ ಒಕ್ಕೂಟ ನಮ್ಮ ಚಿಹ್ನೆ ದುರುಪಯೋಗ ಮಾಡುತ್ತಿದೆ: ಇಸಿಗೆ ಸಿಪಿಎಂ ದೂರು

Date:

ಜಾರ್ಖಂಡ್‌ನಲ್ಲಿ ನಾವು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿಲ್ಲ. ಆದರೂ ಕೂಡಾ ಇಂಡಿಯಾ ಒಕ್ಕೂಟವು ಪ್ರಚಾರಕ್ಕಾಗಿ ನಮ್ಮ ಪಕ್ಷದ ಚಿಹ್ನೆಯನ್ನು ಬಳಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಬಗ್ಗೆ ಸಿಪಿಐಎಂ ಜಾರ್ಖಂಡ್ ಮುಖ್ಯ ಚುನಾವಣಾ ಅಧಿಕಾರಿ ಕೆ ರವಿಕುಮಾರ್ ಅವರಿಗೆ ದೂರು ಸಲ್ಲಿಸಿದೆ. “ಸಿಪಿಎಂ ಪಕ್ಷವು ರಾಜ್ಯದಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ ಮತ್ತು 81 ಸದಸ್ಯರ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ” ಎಂದು ಹೇಳಿದೆ.

“ಜಾರ್ಖಂಡ್‌ನಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ವ್ಯವಸ್ಥೆಯಲ್ಲಿ ಸಿಪಿಎಂ ಅನ್ನು ಸೇರಿಸಲಾಗಿಲ್ಲ. ನಮ್ಮ ಚುನಾವಣಾ ಚಿಹ್ನೆಯಾದ ಸುತ್ತಿಗೆ, ಕುಡುಗೋಲು ಮತ್ತು ನಕ್ಷತ್ರವನ್ನು ಕಾಂಗ್ರೆಸ್ ಮತ್ತು ಜೆಎಂಎಂ ನಮ್ಮ ಒಪ್ಪಿಗೆಯಿಲ್ಲದೆ ತಮ್ಮ ಪ್ರಚಾರದಲ್ಲಿ ಬಳಸುತ್ತಿವೆ ಎಂದು ನಾವು ಎಲ್ಲಾ ಸ್ಥಳಗಳಿಂದ ಮಾಹಿತಿಯನ್ನು ಪಡೆಯುತ್ತಿದ್ದೇವೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾಸನ | ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ: ಸಿಪಿಐಎಂ ಧರ್ಮೇಶ್

ಜಾರ್ಖಂಡ್‌ನಲ್ಲಿ ಕಾಂಗ್ರೆಸ್, ಜೆಎಂಎಂ, ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ಮಾತ್ರ ಅಧಿಕೃತವಾಗಿ ಇಂಡಿಯಾ ಒಕ್ಕೂಟದ ಭಾಗವಾಗಿದೆ ಎಂದು ಸಿಪಿಎಂ ಜಾರ್ಖಂಡ್ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ.

“ಇಂಡಿಯಾ ಒಕ್ಕೂಟವು ಸಿಪಿಎಂನ ಚಿಹ್ನೆಯನ್ನು ಬಳಸುವುದರಿಂದ ಮತದಾರರು ಮತ್ತು ಪಕ್ಷದ ಅಭ್ಯರ್ಥಿಗಳಲ್ಲಿ ಗಮನಾರ್ಹ ಗೊಂದಲ ಉಂಟಾಗಿದೆ. ಸುತ್ತಿಗೆ ಮತ್ತು ಕುಡಗೋಲು ಚಿಹ್ನೆಯ ಅನಧಿಕೃತ ಬಳಕೆಯು ಅನಗತ್ಯ ತೊಡಕುಗಳನ್ನು ಸೃಷ್ಟಿಸುತ್ತಿದೆ. ಇದು ಮತದಾರರ ಮೇಲೆ ಪ್ರಭಾವ ಬೀರಬಹುದು” ಎಂದು ವಿಪ್ಲವ್ ಹೇಳಿದ್ದಾರೆ. ಮಧ್ಯಪ್ರವೇಶಿಸಿ ತನ್ನ ಚಿಹ್ನೆಯ ದುರುಪಯೋಗವನ್ನು ನಿಲ್ಲಿಸುವಂತೆ ಸಿಪಿಎಂ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಕೇರಳ | ಹೊಸ ರಾಜಕೀಯ ಪಕ್ಷ ಕಟ್ಟಲು ಮುಂದಾದ ಸಿಪಿಐಎಂ ಬಂಡಾಯ ಶಾಸಕ ಪಿ ವಿ ಅನ್ವರ್

ಇಂಡಿಯಾ ಒಕ್ಕೂಟದಲ್ಲಿನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಜೆಎಂಎಂ 43 ವಿಧಾನಸಭಾ ಸ್ಥಾನಗಳಲ್ಲಿ, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ (ಎಂಎಲ್) ನಾಲ್ಕು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಧನ್ವಾರ್, ಛತ್ರಾಪುರ ಮತ್ತು ವಿಶ್ರಾಮ್‌ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳ ನಡುವೆ ಸೌಹಾರ್ದ ಸ್ಪರ್ಧೆ ನಡೆಯಲಿದೆ. ಆ ಕ್ಷೇತ್ರಗಳಿಗೆ ಸೀಟು ಹಂಚಿಕೆ ಒಪ್ಪಂದವಾಗಿಲ್ಲ.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...