ಅಂತರ್ಜಾಲ ತಂತ್ರಜ್ಞಾನಕ್ಕೆ ಅನುಗುಣವಾಗಿ ಕನ್ನಡ ಲಿಪಿ ರೂಪಿಸಿ: ಸಚಿವ ಪ್ರಿಯಾಂಕ್ ಖರ್ಗೆ

Date:

  • ಕನ್ನಡಕ್ಕೆ ಒತ್ತು ನೀಡುವ ಕೆಲಸಗಳನ್ನು ರೂಪಿಸಲು ಅಧಿಕಾರಿಗಳಿಗೆ ತಾಕೀತು
  • ಗ್ರಾಮೀಣ ಜನರ ಶ್ರೋಯೋಭಿವೃದ್ದಿಗೆ ಪೂರಕವಾಗುವ ಯೋಜನೆ ರೂಪಿಸಲು ಸಲಹೆ

ಅಂತರ್ಜಾಲ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಂತೆ ಕನ್ನಡ ಭಾಷೆಯನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಅನುಕೂಲವಾಗುವ ಹಾಗೆ ಕನ್ನಡ ಲಿಪಿ ರೂಪಿಸಿ ಎಂದು ಅಧಿಕಾರಿಗಳಿಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಾನಸೌಧದಲ್ಲಿಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕನ್ನಡ ಭಾಷೆಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿರುವ ಸ್ಟಾರ್ಟಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ಕಾರದ ಆದೇಶಗಳು, ನ್ಯಾಯಾಲಯದ ತೀರ್ಪುಗಳು ಸೇರಿದಂತೆ ಸರ್ಕಾರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಅಂತರ್ಜಾಲ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಂತೆ ಕನ್ನಡ ಭಾಷೆಯನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಅನುಕೂಲವಾಗುವ ಹಾಗೆ ಕನ್ನಡ ಲಿಪಿ ರೂಪಿಸಿ ಬೆಳೆಸುವಂತಂಹ ಸ್ಟಾರ್ಟ್ ಅಪ್ ಗಳನ್ನು ರೂಪಿಸಲು ಪ್ರೋತ್ಸಾಹ ನೀಡಲು ಕಾರ್ಯಕ್ರಮ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಸಂಯೋಜಿಸುವಲ್ಲಿ ತೊಡಗಿರುವ ಸಂಸ್ಥೆಗಳು ಕೇವಲ ಸರ್ಕಾರದ ಆಲೋಚನೆಗಳನ್ನು ಮಾತ್ರ ಅನುಷ್ಠಾನಗೊಳಿಸಲು ಯೋಚಿಸಬಾರದು. ಬದಲಿಗೆ ತಮ್ಮ ಅಭಿಪ್ರಾಯಗಳೊಂದಿಗೆ ಯೋಜನೆಗಳನ್ನು ಉತ್ತಮಪಡಿಸುವಲ್ಲೂ ಗಮನ ಹರಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ?: ಕೆಂಪೇಗೌಡ ಜಯಂತಿ : 198ಕ್ಕೆ ಏರಿಕೆಯಾದ ಪ್ರಶಸ್ತಿ ಸಂಖ್ಯೆ; ಜುಲೈ 9ಕ್ಕೆ ಪ್ರಶಸ್ತಿ ಪ್ರದಾನ

ಮುಂದುವರೆದು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯುವಕರು ಹಾಗೂ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತ್ಯೇಕ ಯೋಜನೆಗಳನ್ನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ಟಾರ್ಟ್ ಅಪ್ ಕಂಪನಿಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆಯಿದೆ. ಸಂಬಂಧ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...