ಬಲವಂತವಾಗಿ ಕ್ರಿಮಿನಲ್ ಕಾನೂನುಗಳ ಜಾರಿ, ‘ಬುಲ್ಡೋಜರ್ ನ್ಯಾಯ’ ಒಪ್ಪಲ್ಲ: ಖರ್ಗೆ

Date:

ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸೋಮವಾರದಿಂದ ದೇಶದಲ್ಲಿ ಜಾರಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಕಾನೂನುಗಳನ್ನು ಜಾರಿ ಮಾಡಲಾಗಿದೆ.

ಈ ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ), ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿ ಮಾಡಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಈಗಾಗಲೇ ಮೊದಲ ಪ್ರಕರಣ ದಾಖಲಾಗಿದೆ. ದೆಹಲಿಯ ಬೀದಿ ಬದಿ ವ್ಯಾಪಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ನೂತನ ಭಾರತೀಯ ನ್ಯಾಯ ಸಂಹಿತೆ: ದೆಹಲಿಯ ಬೀದಿ ಬದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು!

ಈ ನೂತನ ಕಾನೂನು ಜಾರಿ ಬೆನ್ನಲ್ಲೇ ಎಕ್ಸ್‌ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, “ಚುನಾವಣೆಯ ರಾಜಕೀಯ ಮತ್ತು ನೈತಿಕ ಆಘಾತದ ನಂತರ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿಯವರು ಸಂವಿಧಾನವನ್ನು ಗೌರವಿಸುವಂತೆ ನಟಿಸುತ್ತಿದ್ದಾರೆ. ಆದರೆ ಇಂದಿನಿಂದ ಜಾರಿಗೆ ಬರುತ್ತಿರುವ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಮೂರು ಕಾನೂನುಗಳನ್ನು ಜಾರಿ ಮಾಡಲು 146 ಸಂಸದರನ್ನು ಬಲವಂತವಾಗಿ ಅಮಾನತುಗೊಳಿಸಲಾಗಿದೆ” ಎಂದು ಆರೋಪಿಸಿದರು.

“ಭಾರತವು ಇನ್ನು ಮುಂದೆ ಈ ‘ಬುಲ್ಡೋಜರ್ ನ್ಯಾಯ’ವನ್ನು ಸಂಸದೀಯ ವ್ಯವಸ್ಥೆಯಲ್ಲಿ ಜಾಲ್ತಿಗೆ ತರಲು ಅವಕಾಶ ನೀಡಲ್ಲ” ಎಂದು ಹೇಳಿದರು.


ಸೋಮವಾರದಿಂದ ಎಲ್ಲಾ ಹೊಸ ಎಫ್‌ಐಆರ್‌ಗಳನ್ನು ಬಿಎನ್‌ಎಸ್ ಅಡಿಯಲ್ಲಿ ದಾಖಲಿಸಲಾಗುತ್ತದೆ. ಆದರೆ ಈ ಹಿಂದೆ ದಾಖಲಾದ ಪ್ರಕರಣಗಳು ಅಂತಿಮ ವಿಲೇವಾರಿಯಾಗುವವರೆಗೆ ಹಳೆಯ ಕಾನೂನುಗಳ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...