ಸಿ ಟಿ ರವಿ, ಅಶ್ವಥ್ ನಾರಾಯಣ್ ‘ಫೇಕ್ ನ್ಯೂಸ್ ಪೆಡ್ಲರ್’ಗಳು: ಸಿದ್ದರಾಮಯ್ಯ ಆಕ್ರೋಶ

Date:

  • ಎಡಿಟ್ ಮಾಡಿದ್ದ ವಿಡಿಯೋ‌ ಹಂಚಿಕೊಂಡಿದ್ದ ಸಿ ಟಿ ರವಿ, ಅಶ್ವಥ್‌ ನಾರಾಯಣ್ ಸಿಎಂ ಟಾಂಗ್,
  • ಯಡಿಯೂರಪ್ಪ ಹೇಳಿಕೆಯನ್ನು ಉಲ್ಲೇಖಿಸಿದ್ದನ್ನು ಮಾತ್ರ ಕಟ್ ಮಾಡಿ ಹಂಚಿಕೊಂಡ ಬಿಜೆಪಿಗರು

ಬೆಳಗಾವಿಯಲ್ಲಿ ಡಿ.15ರಂದು ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯನವರು ಸಾಲಮನ್ನಾ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪನವರು ನೀಡಿದ್ದ ಹಿಂದಿನ ಹೇಳಿಕೆಯನ್ನು ನೀಡಿದ್ದರು. ಬಿಜೆಪಿ ಮುಖಂಡ ಸಿ ಟಿ ರವಿ, ಅಶ್ವಥ್ ನಾರಾಯಣ್ ಅವರು ಇದರ ಅರ್ಧ ಕಟ್ ಮಾಡಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

ಇದರ ವಿರುದ್ಧ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, “ಸಿ ಟಿ ರವಿ, ಅಶ್ವಥ್ ನಾರಾಯಣ್ ಅವರು ಫೇಕ್ ನ್ಯೂಸ್ ಪೆಡ್ಲರ್‌ಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ct ravi 4
ಸಿ ಟಿ ರವಿ ಹಂಚಿಕೊಂಡಿದ್ದ ಕಟ್ ಮಾಡಿದ್ದ ವಿಡಿಯೋ, ಈಗ DELETE ಮಾಡಿದ್ದಾರೆ.

ತನ್ನ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, “ಮಾಜಿ ಶಾಸಕರಾದ ಸಿಟಿ ರವಿ ಮತ್ತವರ ಬಿಜೆಪಿ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ” ಎಂದು ಸಿಎಂ ಜರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನುಡಿದಂತೆ ನಡೆಯುವವರು, ಹಿಂದೆ 2013 – 18ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡಿದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರದರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ. ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ? ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ. ಆದರೆ, ಅಶ್ವಥ್ ನಾರಾಯಣ್ ಅವರು ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತದೆ. ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ” ಎಂದು ಬಿಜೆಪಿ ಮುಖಂಡರ ವಿರುದ್ಧ ಮುಖ್ಯಮಂತ್ರಿ ಹರಿಹಾಯ್ದಿದ್ದಾರೆ.

“ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಬಗ್ಗೆ ಕನಿಷ್ಠ ಕಾಳಜಿ ಇದ್ದರೆ, ನೀವು ಶೇರ್ ಮಾಡಿರುವ ವಿಡಿಯೋ ಡಿಲೀಟ್ ಮಾಡಿ, ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ ‘ಬೊಗಳೆ ಜನತಾ ಪಾರ್ಟಿ’ ಎಂಬ ಕುಖ್ಯಾತಿಯನ್ನು ದೃಢೀಕರಿಸುವಂತಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ. ನರೇಂದ್ರ ಮೋದಿಯವರು, ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ “ಫೇಕ್ ನ್ಯೂಸ್ ಪೆಡ್ಲರ್” ಗಳಾದ ಸಿಟಿ ರವಿ ಹಾಗೂ ಮತ್ತು ಅಶ್ವತ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...